ಮೈಸೂರು: ಇದೇ ಜು.13ರಿಂದ 20ರವರೆಗೆ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ನಡೆಯಲಿದೆ.
ಇದರ ಅಂಗವಾಗಿ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.
ಮೌಲ್ಯಮಾಪನವು ನಗರದ ಕುವೆಂಪುನಗರದ ಜ್ಞಾನಗಂಗಾ, ಜಯಲಕ್ಷ್ಮಿಪುರಂನ ಚಿನ್ಮಯ ಪ್ರೌಢಶಾಲೆ, ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಪ್ರೌಢಶಾಲೆ, ಸರಸ್ವತಿಪುರಂನ ವಿಜಯ ವಿಠಲ ಪ್ರೌಢಶಾಲೆ, ವಿ.ವಿ.ಪುರಂನ ನಿರ್ಮಲಾ ಪ್ರೌಢಶಾಲೆ ಮತ್ತು ಎನ್.ಆರ್.ಮೊಹಲ್ಲಾದ ಸಂತ ಫಿಲೋಮಿನಾ ಪ್ರೌಢಶಾಲೆ
ಈ ಕೇಂದ್ರಗಳಲ್ಲಿ ನಡೆಯಲಿದೆ.
ಈ ಆರು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಮೌಲ್ಯಮಾಪನ ಕಾರ್ಯ ಆರಂಭದಿಂದ ಮುಕ್ತಾಯದವರೆಗೆ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆಂದು ತಿಳಿಸಿದ್ದಾರೆ.