ನ್ಯೂಡೆಲ್ಲಿ: ಜಿಎಸ್‌ಟಿಯ ಮೂರು ತಿಂಗಳ ಬಾಕಿ 4,313 ಕೋಟಿ ರೂ. ಅನುದಾನವನ್ನು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಮೂರು ತಿಂಗಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಾಯ್ದೆಯನ್ವಯ 2019ರ ಡಿಸೆಂಬರ್‌ನಿಂದ 2020ರ ಫೆಬ್ರವರಿವರೆಗಿನ ಆದಾಯ ನಷ್ಟದ ಪರಿಹಾರವನ್ನು ಕೇಂದ್ರ ಸರ್ಕಾರ ಕೊಟ್ಟಿದೆ
ಮೂರು ತಿಂಗಳ ಅವಧಿಯಲ್ಲಿ ರಾಜ್ಯ ಎದುರಿಸಿದ ಆದಾಯ ನಷ್ಟದ ಪರಿಹಾರವನ್ನು ಒದಗಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ತಿಳಿಸಿದೆ.
2017ರ ಜು.1ರಂದು ಜಾರಿ ಬಂದ ಜಿಎಸ್‌ಟಿ ಕಾಯ್ದೆಯಂತೆ 5 ವರ್ಷದ ವರೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಆದಾಯ ನಷ್ಟ ಪರಿಹಾರ ನೀಡಲಿದೆ. ಲಾಕ್‌ಡೌನ್ ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯಕ್ಕೆ ಇದು ಹಣ ನೆರವಿಗೆ ಬರಲಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಜಿಎಸ್‌ಟಿ ಹೊರತಪಡಿಸಿ, 15ನೇ ಹಣಕಾಸು ಆಯೋಗ ಈ ಹಿಂದೆ ಶಿಫಾರಸು ಮಾಡಿದ್ದ ವಿಶೇಷ ಅನುದಾನದಲ್ಲಿಯೂ 5,495 ಕೋಟಿ ರೂ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿದೆ. ಈ ಹಣ ಬಿಡುಗಡೆ ನಿರೀಕ್ಷೆಯಲ್ಲಿ ರಾಜ್ಯಸರ್ಕಾರವಿದೆ. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಹಣಕಾಸು ಸಚವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಜಿಎಸ್‌ಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ, ಜಿಎಸ್‌ಟಿ ಸಮಿತಿ ಸದಸ್ಯರೂ ಆದ ಬಸವರಾಜ ಬೊಮ್ಮಾಯಿ, ಈ ಸಂಬಂಧ ಸಿಎಂ ಯಡಿಯೂರಪ್ಪ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಮನವಿ ಮಾಡಿದ್ದರು. ಅದಕ್ಕೆ ಸ್ಪಂದಿಸಿ ಕಳೆದ ಫೆಬ್ರವರಿವರೆಗಿನ ಮೂರು ತಿಂಗಳ ಅವಧಿಯ ಜಿಎಸ್‌ಟಿ ಬಾಕಿ ಬಿಡುಗಡೆ ಮಾಡಿದ್ದಾರೆ. ಇನ್ನೂ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಜಿಎಸ್‌ಟಿ ಮೊತ್ತ 1800 ಕೋಟಿ ರೂ. ರಾಜ್ಯಕ್ಕೆ ಬರಬೇಕಿದೆ ಅದು ಜುಲೈನಲ್ಲಿ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail