ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ಭರಪೂರ ಕೊಡುಗೆ ನೀಡಿದ ಕೇಂದ್ರ ಸರ್ಕಾರ
ತೆರಿಗೆದಾರರು, ಗುತ್ತಿಗೆದಾರರು, ಉದ್ಯಮಿಗಳಿಗೂ ಹರ್ಷತಂದ ವಿತ್ತ ಸಚಿವರ ಸುದ್ದಿಗೋಷ್ಠಿ
ನ್ಯೂಡೆಲ್ಲಿ: ಕೋವಿಡ್ ಸೋಂಕು ತಡೆಯುವ ಸಂಬಂಧ ಲಾಕ್ ಡೌನ್ ಜಾರಿಯಲ್ಲಿದ್ದ ಪರಿಣಾಮ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡಿದ್ದಾರೆ.
ಸ್ವಾವಲಂಬಿ ಭಾರತವನ್ನು ಮಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹಣದ ಹೊಳೆಯನ್ನೇ ಹರಿಸಲು ಯೋಜನೆ ರೂಪಿಸಿದ್ದು, ಈ ಮೂಲಕ ಸಣ್ಣ ಕೈಗಾರಿಕೆಗಳನ್ನು ಉತ್ತೇಜನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಎಂಎಸ್‌ಎಂಇ ಅಂಡರ್‌ನಲ್ಲಿ ಬರುವ 2 ಲಕ್ಷ ಕೈಗಾರಿಕೆಗಳಿಗೆ ಸಾಲ ಸೌಲಭ್ಯ ನೀಡುತ್ತಿದೆ. ಅಷ್ಟೇ ಅಲ್ಲದೇ ಸಾಲವನ್ನು ಒಂದು ವರ್ಷದ ವರೆಗೆ ಕಟ್ಟದಿರುವಂತೆ ತಿಳಿಸಿದೆ.
ಇನ್ನು 25 ಕೋಟಿ ರೂ. ಬಾಕಿ ಸಾಲ ಇರುವ ಸಣ್ಣ ಕೈಗಾರಿಕೆಗಳ 3 ಲಕ್ಷ ಕೋಟಿ ರೂ. ಕಾಯ್ದಿರಿಸಿದೆ. ಇಂದಿನಿಂದಲೇ 4 ವರ್ಷದ ಅವಧಿ ಸಾಲ ಪಡೆಯ ಬಹುದಾಗಿದೆ. ಜತೆಗೆ ಅಕ್ಟೋಬರ್ 31ರವರೆಗೂ ಸಾಲ ಸೌಲಭ್ಯ ಪಡೆಯಲು ಅನುಕೂಲ ಕಲ್ಪಿಸಿದೆ. ಸಾಲ ಪಡೆಯಲು ಯಾವುದೇ ಗ್ಯಾರಂಟಿ ಬೇಕಿಲ್ಲ. ಅದಕ್ಕೆ ಸರ್ಕಾರದಿಂದಲೇ ಗ್ಯಾರಂಟಿ ಯೋಜನೆ ರೂಪಿಸಿದೆ. ಎಂದು ವಿವರಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
100 ಕೋಟಿ ರೂ. ವ್ಯವಹಾರದ ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಲಾಭ ತಂದು ಕೊಡುವ ನೀಟ್ಟಿನಲ್ಲೂ ಯೋಜನೆ ರೂಪಿಸಿದ್ದು ಈ ಸೌಲಭ್ಯವನ್ನು ಫಲಾನುಭವಿಗಳಿಗೆ ನೇರವಾಗಿ ನೀಡಲಾಗುವುದು ಎಂದು ತಿಳಿಸಿದರು.
ಸ್ವಾವಲಬಿ ಭಾರತಕ್ಕಾಗಿ ವಿಶೇಷ ಪ್ಯಾಕೇಜ್ ನೀಡಿದ್ದು. ತೆರಿಗೆ ಪಾವತಿದಾರರಿಗೆ 18 ಕೋಟಿ ರೂ. ರೀಫಂಡ್ ಮಾಡಲಿದೆ. ಸಣ್ಣ ಕೈಗಾರಿಕೆಗಳಿಗೆ 20 ಸಾವಿರ ಕೋಟಿ ರೂ. ಸಾಲ ನೀಡಲಿದೆ ಎಂದು ಸಚಿವರು ವಿವರಿಸಿದರು.
ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 30 ಸಾವಿರ ಕೋಟಿ ನೆರವು. 45 ಸಾವಿರ ಕೋಟಿ ಸಾಲ ಸೌಲಭ್ಯ ನೀಡಲಾಗುವುದು. ಇನ್ನು ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ 72 ಲಕ್ಷ ನೌಕರರಿಗೆ ಜೂನ್ ಜುಲೈ ಮತ್ತು ಆಗಸ್ಟ್ ನಲ್ಲಿನ ಇಪಿಎಫ್ ನ 2500 ಕೋಟಿ ಹಣವನ್ನು ಸರ್ಕಾರವೇ ಭರಿಸಲಿದೆ. ವಿದ್ಯುತ್ ಕಂಪನಿಗಳಿಗೆ 90 ಸಾವಿರ ಕೋಟಿ ರೂ. ನೆರವು ನೀಡಲಾಗುದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕಿರು, ಸಣ್ಣ ಮತ್ತು ಮಧ್ಯ ಕೈಗಾರಿಕಾ ವಲಯಗಳಿಗೆ ಮೂರು ಲಕ್ಷ ಕೋಟಿ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಂಪನಿ ಮತ್ತು ವ್ಯವಹಾರಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು.
ಸಣ್ಣ ಸಾಲ ನೀಡುವ ಕಂಪನಿಗಳಿಗೆ ಕೇಂದ್ರದಿಂದ ನೆರವು, ಇದುವರೆಗೆ 52 ಸಾವಿರ ಕೋಟಿ ರೂಪಾಯಿ ಜನ್ ಧನ್ ಖಾತೆಗಳಿಗೆ ವರ್ಗಾಯಿಸಿದ್ದೇವೆ.
ಟಿಡಿಎಸ್/ಟಿಸಿಎಸ್ ನ ಶೇ.25ರಷ್ಟು ತೆರಿಗೆ ಕಡಿತ. ಇದರಿಂದ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2019-20ನೇ ಸಾಲಿನ ಆದಾಯ ತೆರಿಗೆ ಪಾವತಿ ದಿನಾಂಕವನ್ನು ಜುಲೈ 31ರಿಂದ ಅಕ್ಟೋಬರ್, ನವೆಂಬರ್ 30ರವರೆಗೆ ವಿಸ್ತರಣೆ. ಮೇ 14ರಿಂದ 2021ರ ಮಾರ್ಚ್ 31ರವರೆಗಿನ ಟಿಡಿಎಸ್ ಮತ್ತು ಟಿಸಿಎಸ್ ಮೇಲಿನ ಶೇ.25ರಷ್ಟು ತೆರಿಗೆ ಕಡಿತ ಮಾಡಲಾಗಿದ್ದು, ಇದು ಎಲ್ಲಾ ತೆರಿಗೆದಾರರಿಗೂ ಅನ್ವಯವಾಗಲಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಭವಿಷ್ಯ ನಿಧಿ ಖಾತೆಗಳಿಗೆ ಸಲ್ಲಿಸುವಂತಹ ಕೊಡುಗೆ
ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ ಉದ್ಯೋಗಿಗಳ ಪಾಲು ಹಾಗೂ ಉದ್ಯೋಗದಾತರ ಪಾಲು ತಲಾ 12% ಸಲ್ಲಿಕೆಯಾಗುತ್ತಿದೆ. ಆದರೆ ಇನ್ನು ಮುಂದಿನ ಮೂರು ತಿಂಗಳು ಈ ಪಾಲನ್ನು ಶೇ. 10ಕ್ಕೆ ಇಳಿಕೆ ಮಾಡಲಾಗಿದೆ. ಈ ಮೂಲಕ ಉದ್ಯೋಗಿಗಳಿಗೆ ಕೈಗೆ ಸಿಗುವ ವೇತನದ ಹಣದಲ್ಲಿ ಸ್ವಲ್ಪ ಹೆಚ್ಚಳವಾಗಲಿದ್ದು ಇದರಿಂದ ಹಣದ ಚಲಾವಣೆ ಹೆಚ್ಚಾಗಲಿದೆ ಎಂಬುದು ಸರಕಾರದ ಲೆಕ್ಕಾಚಾರವಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಈ ಮೂಲಕ ಉದ್ಯಮಿಗಳಿಗೆ ಹಾಗೂ ಉದ್ಯೋಗಿಗಳಿಗೆ ಮುಂದಿನ ಮೂರು ತಿಂಗಳುಗಳ ಕಾಲ ಭವಿಷ್ಯ ನಿಧಿ ಖಾತೆಗೆ ಜಮಾ ಮಾಡುವ ಮೊತ್ತವನ್ನು ತಲಾ 2% ಕಡಿಮೆಗೊಳಿಸುವ ಮೂಲಕ ಮಾರುಕಟ್ಟೆಗೆ ಸರಿಸುಮಾರು 6750 ಕೋಟಿ ರೂಪಾಯಿಗಳ ಹಣದ ಹರಿವು ಉಂಟಾಗುವಲ್ಲಿ ಸಹಕಾರಿಯಾಗುವುದು ಎಂದು ವಿತ್ತಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಆದರೆ ಕೇಂದ್ರದ ನಿಯಂತ್ರಣದಲ್ಲಿರುವ ಸಾರ್ವಜನಿಕ ರಂಗದ ಉದ್ದಿಮೆಗಳು ಹಾಗೂ ರಾಜ್ಯ ಸರಕಾರದ ಅಡಿಯಲ್ಲಿ ಬರುವ ಸಾರ್ವಜನಿಕ ರಂಗದ ಉದ್ಯಮಗಳು ತಮ್ಮ ಉದ್ಯೋಗಿಗಳ ಪಿ.ಎಫ್. ಖಾತೆಗೆ ಯಥಾಪ್ರಕಾರ 12% ಪಾಲನ್ನು ಜಮಾ ಮಾಡಲಿವೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್ ನಡಿಯಲ್ಲಿ ಶೇ.24 ಭವಿಷ್ಯನಿಧಿ ಬೆಂಬಲಕ್ಕೊಳಪಡದ ಉದ್ಯೋಗಿಗಳಿಗೆಲ್ಲಾ ಈ ಸೌಲಭ್ಯ ಅನ್ವಯಿಸಲಿದೆ. ಇದರಿಂದಾಗಿ ಇಪಿಎಫ್ಒನಡಿಯಲ್ಲಿ ಬರುವ 6.5 ಲಕ್ಷ ಉದ್ಯಮಗಳಿಗೆ ಹಾಗೂ 4.3 ಕೋಟಿ ಉದ್ಯೋಗಿಗಳಿಗೆ ಪ್ರಯೋಜನ ಲಭಿಸಲಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
Related
You Might Also Like
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ
ಬೆಂಗಳೂರು: ಪತ್ನಿ ಹಾಗೂ ಪತ್ನಿ ತಂದೆಯ ಅಂದರೆ ಮಾನನ ಕಿರುಕುಳದಿಂದ ಮಾನಸಿಕವಾಗಿ ಭಾರಿ ನೋವು ಅನುಭವಿಸಿದ ಹೆಡ್‌ಕಾನ್‌ಸ್ಟೇಬಲ್ ಒಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದ...
9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ...
KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು...
KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಈಡೇರಿಕಗಾಗಿ ಜಂಟಿ ಕ್ರಿಯಾ ಸಮಿತಿ ಇದೇ ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದೆ. ಅದರ ಮುಂದುವರಿದ ಭಾಗವಾಗಿ...
ಸರ್ಕಾರದ ನಡೆಯೇ BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG
ಬೆಂಗಳೂರು: ರಾಜ್ಯ ಸರ್ಕಾರದ 5 ಮಹತ್ವದ ಗ್ಯಾರಂಟಿ ಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಕರ್ನಾಟಕದಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಎಲ್ಲಿ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾದ ಯೋಜನೆ...
KSRTC ಕುಣಿಗಲ್: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರೊಬ್ಬರ ಮೇಲೆ ಲಾ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರೂ ಸಹ ಅವರನ್ನು ಬಂಧಿಸದಿರುವುದಕ್ಕೆ ಅಸಮಾಧಾನಗೊಂಡ ಹಲ್ಲೆಗೊಳಗಾದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ....
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ
ಸಾರಿಗೆ ನೌಕರರತ್ತ ಒಮ್ಮೆ ನೋಡಿ l ವೇತನ ಹೆಚ್ಚಳ ಸಮಸ್ಯೆಗೆ ಇತಿಶ್ರೀ ನಿಮ್ಮಿಂದ ಸಾಧ್ಯ ಬೆಂಗಳೂರು: ತಿಂಗಳು ಪೂರ್ತಿ ದುಡಿದರೂ ಸರಿಯಾದ ಸಮಯಕ್ಕೆ ವೇತನ ಸಿಗದೆ, ಸಿಕ್ಕ...
BMTC: ಆಧಾರ್ ಕಾರ್ಡ್ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಆಧಾರ್ ಕಾರ್ಡ್ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕ ರಾಜ್ಯದ್ದಾಗಿದ್ದರೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಬೇಕು...
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್
ಹಾವೇರಿ: ಚೆಲಿಸುತ್ತಿದ್ದ ಬಸ್ ಹತ್ತಲು ಹೋಗಿ ವೃದ್ಧೆಯೊಬ್ಬರು ಕೆಳಗೆ ಬಿದ್ದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಹರಿದು ಎರಡು ಕಾಲುಗಳು ತುಂಡಾಗಿರುವ ಘಟನೆ ನಗರದ ಕೇಂದ್ರ ನಿಲ್ದಾಣದಲ್ಲಿ...
KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್ ಬಂಧನ
ಮಡಿಕೇರಿ: ನಿತ್ಯ ತಾನು ಬಸ್ ಚಲಾಯಿಸುತ್ತಿದ್ದ ಮಾರ್ಗವನ್ನು ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದಕ್ಕೆ ಸಹೋದ್ಯೋಗಿ ನಿರ್ವಾಹಕನೆ ಕಾರಣ ಕಾರಣ ಎಂದು ನಿರ್ವಾಹಕನ ಮೇಲೆ ಮುಗಿಬಿದ್ದು ಸಾರ್ವಜನಿಕ...
KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು...
ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟರ್: ನಾಲೆಗೆ ಹಾರಿ ಆತ್ಮಹತ್ಯೆ
ಮೈಸೂರು: ಸಾಲದ ಸುಳಿಯಲ್ಲಿ ಸಿಲುಕಿ ಅದನ್ನು ತೀರಿಸಲಾಗದೆ ಮನಸ್ಸಿನಲ್ಲಿ ಭಾರಿ ನೋವು ಅನುಭವಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ವಿಭಾಗದ ನಿರ್ವಾಹಕರೊಬ್ಬರು ನದಿಗೆ ಹಾರಿ...