NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆಯಿಂದ ರಾಜಧಾನಿ ಅನ್‌ಲಾಕ್ ‌:  ಡಿಸಿಎಂ ಅಶ್ವತ್ಥನಾರಾಯಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಳೆಯಿಂದ ವಾರದ ಹಿಂದೆ ಇದ್ದ ಸ್ಥಿತಿಗೆ ರಾಜಧಾನಿ ಮರುಳಲಿದೆ. ಆದರೆ ಲಾಕ್‌ಡೌನ್ ಮಾರ್ಗಸೂಚಿಗಳಲ್ಲಿ ತಿಳಿಸಿದ ಕೆಲವು ವಲಯಗಳು ಅನ್‌ಲಾಕ್‌ ಆಗಲಿವೆ. ಈ ನಡುವೆ ಜಿಮ್, ಶಾಲೆ ಮುಂತಾದ ವಲಯಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೊಡ್ಡ ಮಟ್ಟದಲ್ಲಿ ಜನಸಂದಣಿ ಸೇರುವ ಸ್ಥಳಗಳಲ್ಲಿ ಕೆಲವು ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಅಲ್ಲಿ ಇನ್ನೂ ಕೆಲವು ದಿನ ನಿರ್ಬಂಧ ಮುಂದುವರಿಸಬೇಕಾಗುತ್ತದೆ. ಇನ್ನು ಸ್ವಯಂ ಪ್ರೇರಿತ ಲಾಕ್‌ಡೌನ್‌ ಹೇರಿಕೊಂಡರೆ ಅದನ್ನು ನಾವು ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.

ಅನ್‌ಲಾಕ್‌ ಆದ ಬಳಿಕವೂ ಕಟ್ಟು ನಿಟ್ಟಿನ ನಿಯಮ ಪಾಲನೆ ಮಾಡಬೇಕಾಗುತ್ತದೆ. ಇದಕ್ಕಾಗಿ ಬೂತ್‌ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈ ತಂಡದಲ್ಲಿ 5-6 ಮಂದಿ ಅಧಿಕಾರಿಗಳು ಇರುತ್ತಾರೆ. ಇವರು ಕೊರೊನಾ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‌ಮೆಂಟ್‌ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದು ವಾರದ ಲಾಕ್‌ ಡೌನ್ ಮನಸ್ಸಿಲ್ಲದ ಮನಸ್ಸಿನಲ್ಲಿ ಜಾರಿಗೊಳಿಸಲಾಯಿತು. ವಿವಿಧ ಸಂಘಟನೆಗಳು, ತಜ್ಞರು, ವಿರೋಧ ಪಕ್ಷದವರು ನೀಡಿದ ಸಲಹೆಯಂತೆ ಅದನ್ನು ಜಾರಿಗೊಳಿಸಲಾಯಿತು. ಅದಕ್ಕೂ ಸಾಕಷ್ಟು ರೀತಿಯಲ್ಲಿ ತಯಾರಿ ಮಾಡಲಾಗಿತ್ತು. ಲಾಕ್‌ಡೌನ್‌ನಿಂದ ಸೋಂಕು ವೇಗವಾಗಿ ತಡೆಯುವುದನ್ನು ನಿಯಂತ್ರಣ ಮಾಡಬಹುದು ಎಂಬ ಉದ್ದೇಶವಿತ್ತು ಎಂದರು.

 

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...