Vijayapatha – ವಿಜಯಪಥ
Saturday, November 2, 2024
NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್: ಮಂತ್ರಿಭಾಗ್ಯ ಕಳೆದುಕೊಂಡ ವಿಶ್ವನಾಥ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಶಾಸಕ ಸ್ಥಾನದಿಂದ ಅನರ್ಹಗೊಂಡ ಎಚ್. ವಿಶ್ವನಾಥ್ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರೆ ಮಾತ್ರ ಸಚಿವರಾಗಬಹುದು ಎಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶ್ವನಾಥ್ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಇಂದು ತಿರಸ್ಕರಿಸಿದ್ದು, ಇದರೊಂದಿಗೆ ಸಚಿವರಾಗುವ ವಿಶ್ವನಾಥ್ ಅವರ ಕನಸು ಭಗ್ನಗೊಂಡಿದೆ. ಹೀಗಾಗಿ ಅವರಿಗೆ ಮಂತ್ರಿ ಆಗಬೇಕು ಎಂಬ ಕೊನೆಯ ಬಾಗಿಲೂ ಮುಚ್ಚಿದಂತಾಗಿದೆ.

ಮೈತ್ರಿ ಸರ್ಕಾರ ಇದ್ದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ 17 ಶಾಸಕರು ರಾಜೀನಾಮೆ ನೀಡಿ ಬಿಎಸ್​ವೈ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾಗಿದ್ದರು. ನಂತರ ಇವರನ್ನು ಸ್ಪೀಕರ್ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರು.

ಹೀಗಾಗಿ ಉಪಚುನಾವಣೆಗಳ ಎದುರಿಸಿದ ಬಹುತೇಕ ಅನರ್ಹ ಶಾಸಕರು ಮಂತ್ರಿಗಳಾಗಿದ್ದಾರೆ. ವಿಶ್ವನಾಥ್ ಅವರನ್ನ ಪರಿಷತ್​ಗೆ ನಾಮನಿರ್ದೇಶನ ಮಾಡಲಾಯಿತು. ಆದರೆ, ಅವರು ಮಂತ್ರಿ ಸ್ಥಾನಕ್ಕೆ ಯತ್ನಿಸುತ್ತಿರುವಂತೆಯೇ ರಾಜ್ಯ ಹೈಕೋರ್ಟ್​ನಲ್ಲಿ ಅವರ ವಿರುದ್ಧ ಖಾಸಗಿ ದೂರು ದಾಖಲಾಯಿತು. ಶಾಸಕ ಸ್ಥಾನದ ಅನರ್ಹತೆ ಇರುವ ವಿಶ್ವನಾಥ್ ಅವರು ಮಂತ್ರಿ ಆಗಲು ಸಾಧ್ಯವಿಲ್ಲ ಎಂದು ದೂರಿನಲ್ಲಿ ಹೇಳಲಾಯಿತು.

ನವೆಂಬರ್ 30ರಂದ ನೀಡಿದ ತೀರ್ಪಿನಲ್ಲಿ ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠವು ವಿಶ್ವನಾಥ್ ಮಂತ್ರಿ ಆಗಲು ಸಾಧ್ಯ ಇಲ್ಲ ಎಂದು ತೀರ್ಪು ನೀಡಿತು. ನಾಮನಿರ್ದೇಶನಗೊಂಡು ಶಾಸಕರಾದರೆ ಮಂತ್ರಿ ಆಗಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಗೆದ್ದು ಶಾಸಕರಾದರೆ ಮಾತ್ರ ಮಂತ್ರಿ ಆಗಬಹುದು ಎಂದು ಕೋರ್ಟ್ ಆದೇಶ ನೀಡಿತು. ಈ ತೀರ್ಪನ್ನು ಪ್ರಶ್ನಿಸಿ ವಿಶ್ವನಾಥ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸರ್ವೋಚ್ಚ ನ್ಯಾಯಾಲಯ ಕೂಡ ಹೈಕೋರ್ಟ್ ತೀರ್ಪನ್ನೇ ಎತ್ತಿಹಿಡಿದಿದೆ.

ಅಂದು ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವವರೆಗೂ ಅನರ್ಹ ಶಾಸಕರಾಗಿಯೇ ಇರುತ್ತಾರೆ ಎಂದು ನ್ಯಾಯಾಲಯ ಕೂಡ ತೀರ್ಪು ನೀಡಿತ್ತು. ಅದಾದ ಬಳಿಕ ವಿಶ್ವನಾಥ್ ಸೇರಿ 13 ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಿದರು. ಅವರ ಪೈಕಿ ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ಸೋಲು ಅನುಭವಿಸಿದರು. ಉಳಿದವರು ಗೆದ್ದರು.

ನಂತರ ವಿಧಾನಪರಿಷತ್ ಚುನಾವಣೆಯಲ್ಲಿ ಆರ್. ಶಂಕರ್ ಅವರನ್ನು ನಿಲ್ಲಿಸಿ ಗೆಲ್ಲಿಸಲಾಯಿತು. ಮುನಿರತ್ನ ಕೂಡ ಉಪಚುನಾವಣೆಯಲ್ಲಿ ಗೆದ್ದರು. ಮಸ್ಕಿ ಕ್ಷೇತ್ರದ ಉಪಚುನಾವಣೆ ನಡೆಯಬೇಕಿದ್ದು, ಪ್ರತಾಪ್ ಗೌಡ ಪಾಟೀಲ್ ಅವರ ಹಣೆಬರಹ ನಿರ್ಧಾರವಾಗಬೇಕಿದೆ.

13 ಕ್ಷೇತ್ರಗಳ ಉಪಚುನಾವಣೆಯ ವೇಳೆ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸದಂತೆ ಯಡಿಯೂರಪ್ಪ ನೀಡಿದ ಸಲಹೆಯನ್ನು ವಿಶ್ವನಾಥ್ ಕೇಳಿದ್ದರೆ ಶಿಕ್ಷಕರು ಅಥವಾ ಪದವೀಧರ ಕ್ಷೇತ್ರಗಳಲ್ಲಿ ಕಣಕ್ಕಿಳಿಸುವುದರ ಮೂಲಕವೋ ಅಥವಾ ಪರಿಷತ್ ಚುನಾವಣೆಯಲ್ಲಿ ಕಣಕ್ಕಿಳಿಸಿಯೋ ಶಾಸಕರನ್ನಾಗಿ ಮಾಡುವ ಸಾಧ್ಯತೆ ಇತ್ತು ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.

ಮೈತ್ರಿಪಾಳಯದಿಂದ ಬಿಜೆಪಿಗೆ ವಲಸೆ ಬಂದ 16 ಮಂದಿ ಪೈಕಿ 11 ಮಂದಿ ಸದ್ಯ ಸಂಪುಟದಲ್ಲಿದ್ದಾರೆ. ಎಚ್ ನಾಗೇಶ್ ಅವರು ಮಂತ್ರಿಯಾಗಿದ್ದರೂ ಸದ್ಯ ಸಂಪುಟದಿಂದ ಹೊರಗೆ ಬಂದಿದ್ದಾರೆ. ಪ್ರತಾಪ್ ಗೌಡ ಪಾಟೀಲ್ ಅವರಿಗೆ ಇನ್ನೂ ಉಪಚುನಾವಣೆಯ ದಾರಿ ಇದೆ.

ಮಹೇಶ್ ಕುಮಟಳ್ಳಿ ಮತ್ತು ಮುನಿರತ್ನಗೆ ಮುಂದಿನ ದಿನಗಳಲ್ಲಿ ಮಂತ್ರಿಮಂಡಲ ಸೇರ್ಪಡೆ ಮಾಡುವ ಭರವಸೆಯನ್ನು ಸಿಎಂ ನೀಡಿದ್ದಾರೆನ್ನಲಾಗಿದೆ. ಆದರೆ ಈಗ ವಿಶ್ವನಾಥ್ ಅವರೊಬ್ಬರಿಗೆ ಮಾತ್ರ ಎಲ್ಲಾ ದಾರಿಗಳು ಶಾಶ್ವತವಾಗಿ ಮುಚ್ಚಿದಂತಾಗಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ