Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಪೋಷಕರು, ಶಾಲೆಗಳ ಸಮಸ್ಯೆ ಪರಿಹರಿಸದ ಶಿಕ್ಷಣ ಸಚಿವರೇ ಎಲ್ಲಿದ್ದೀರಿ? : ಎಎಪಿಯ ಶರತ್ ಖಾದ್ರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಕ್ಕಳನ್ನು ಶಾಲೆಗೆ ಕಳುಹಿಸಲು ಆಗದೆ ಒದ್ದಾಡುತ್ತಿರುವ ಪೋಷಕರು, ಸರ್ಕಾರದಿಂದ ಯಾವುದೇ ರೀತಿಯ ಸಹಾಯ ದೊರೆಯುತ್ತಿಲ್ಲ ಎಂದು ಆರೋಪಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಕೆಲಸ ಕಳೆದುಕೊಂಡು ಕಂಗಾಲಾಗಿರುವ ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಕಾಣದ ಶಿಕ್ಷಣ ಮಂತ್ರಿ “ಎಲ್ಲಿದ್ದೀರಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ” ಶೀಘ್ರ ಸಮಸ್ಯೆ ಬಗೆಹರಿಸಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆಗ್ರಹಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ಪೋಷಕರ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು, ಶಿಕ್ಷಣ ಸಂಸ್ಥೆಗಳ ವಿರುದ್ಧ ಪೋಷಕರನ್ನು ಎತ್ತಿಕಟ್ಟುವ ಬದಲು ಸಮಸ್ಯೆ ಬಗೆಹರಿಸಿ, ಮೌನ ಮುರಿಯಿರಿ ಎಂದರು.

ಜನರ ಆದಾಯ ಕುಸಿದು ಹೋಗಿದೆ ಹಾಗೂ ಸಣ್ಣ, ಸಣ್ಣ ಶಿಕ್ಷಣ ಸಂಸ್ಥೆಗಳು ಸಾಲದ ಸುಳಿಯಲ್ಲಿ ಸಿಲುಕಿವೆ ಇಂತಹ ಸಂಸ್ಥೆಗಳ ನೆರವಿಗೆ ನಿಲ್ಲಿ, ಸಬ್ಸಿಡಿ ಘೋಷಿಸಿ ಎಂದು ಸಲಹೆ ನೀಡಿದರು.

ಸರ್ಕಾರಿ ಶಾಲೆಗಳೂ ಮೂಲ ಸೌಕರ್ಯಗಳಿಲ್ಲದೆ ಸೊರಗುತ್ತಿವೆ, ಖಾಸಗಿ ಶಾಲೆಗಳ ಶುಲ್ಕ ಗಗನಕ್ಕೇರಿದೆ ಈ ಸಂಘರ್ಷದಲ್ಲಿ ಮಕ್ಕಳು ಬಡವಾಗುತ್ತಿದ್ದಾರೆ, ಎಲ್ಲಿದ್ದೀರಿ ಬನ್ನಿ ಸಮಸ್ಯೆ ಬಗೆಹರಿಸಿ ಸುರೇಶ್ ಕುಮಾರ್ ಅವರೇ ಎಂದು ಒತ್ತಾಯಿಸಿದರು.

ಸಂಪಂಗಿರಾಮ‌ನಗರ ವಾರ್ಡ್ ಅಧ್ಯಕ್ಷ ಪ್ರಕಾಶ್ ನೆಡುಂಗಡಿ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳು ವಿವಿಧ ಸೌಲಭ್ಯಗಳ ಹೆಸರಿನಲ್ಲಿ ವಸೂಲಿ ಮಾಡುತ್ತಿರುವ ಶುಲ್ಕಗಳ ಬಗ್ಗೆ ಸರ್ಕಾರದಿಂದ ಏನಾದರೂ ನೀತಿ- ನಿರ್ದೇಶನವಿದೆಯೇ? ಉತ್ತರಿಸುವಿರಾ ಎಂದರು.

ಶುಲ್ಕ ಕಟ್ಟಲು ಆಗದ ಮಕ್ಕಳನ್ನು ಇತರೇ ಮಕ್ಕಳ ಎದುರು ಅವಮಾನಿಸಲಾಗುತ್ತಿದೆ, ಖಾಸಗಿ ಶಿಕ್ಷಣ ಸಂಸ್ಥೆಯೊಂದು ಇಡೀ ದಿನ ಫೀ ಕಟ್ಟದ ಮಕ್ಕಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದೆ, ಇದು ಪುಟ್ಟ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ ಭವಿಷ್ಯದಲ್ಲಿ ಸಾಕಷ್ಟು ತೊಂದರೆಗೆ ಕಾರಣವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಂಪಂಗಿರಾಮ ನಗರ ವಾರ್ಡ್ ಅಧ್ಯಕ್ಷ ಪ್ರಕಾಶ್ ನೆಡುಂಗಡಿ ಇದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ