NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ-ಎಚ್‌ಡಿಕೆ ಪದೇಪದೆ ಭೇಟಿಗೆ ವಿಶ್ವನಾಥ್ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬ ರೀತಿ ಮುಖ್ಯಮಂತ್ರಿ ಯಡಿಯೂರಪ್ಪ ವರ್ತಿಸುತ್ತಿದ್ದಾರೆ, ನಾವು ಯಾರನ್ನು ವಿರೋಧಿಸಿ ಬಂದಿದ್ದೆವೋ ಅವರ ಜೊತೆ ನಂಟು ಬೆಳೆಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಿಎಂ ಯಡಿಯೂರಪ್ಪ ಮತ್ತು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಪದೇಪದೆ ಭೇಟಿಯಾಗಿ ಹತ್ತಿರವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರುವ ವಿಶ್ವನಾಥ್‌, ನಾವು ಯಾರನ್ನು ವಿರೋಧಿಸಿದ್ದೆವೋ ಅವರೇ ಈಗ ಯಡಿಯೂರಪ್ಪ ಅವರ ಸ್ನೇಹಿತರಾಗಿದ್ದಾರೆ ಎಂದು ಬಿಎಸ್‌ವೈ ಅವರನ್ನು ತಮ್ಮ ಮೊನಚಾದ ಮಾತಿನಿಂದ ಇರಿದಿದ್ದಾರೆ.

ಬಿಎಸ್‌ವೈ ಅವರ ನಡೆ ತಂದೆಯನ್ನು ಕೊಂದವನನ್ನೇ, ತಾಯಿಯು ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ಷೇಕ್ಸ್‌ಪಿಯರ್‌ನ ‘ಹ್ಯಾಮ್ಲೆಟ್‌’ ನಾಟಕದಲ್ಲಿ ಇದೇ ರೀತಿ ಪ್ರಸಂಗ ಇದೆ. ನಮ್ಮ ಹಾಗೂ ಸರ್ಕಾರದ ಪರಿಸ್ಥಿತಿಯೂ ಹಾಗೇ ಆಗಿದೆ ಎಂದು ವಿಶ್ವನಾಥ್ ಅಸಮಾಧಾನ ಹೊರಹಾಕಿದರು.

ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಲು ಇಷ್ಟೊಂದು ಅವಸರ ಏಕೆ? ಬಿಜೆಪಿ ಸರ್ಕಾರ ರಚನೆಯಲ್ಲಿ ಯೋಗೇಶ್ವರ್‌ ಪಾತ್ರವೇನಿತ್ತು? ಅವರೇನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರೇ? ಎಂದು ಪ್ರಶ್ನಿಸಿರುವ ವಿಶ್ವನಾಥ್, ಅವರ ಬದಲಿಗೆ ಪಕ್ಷದ ಹಿರಿಯ ನಾಯಕರಾದ ಉಮೇಶ್ ಕತ್ತಿ, ಬಸವನಗೌಡ ಪಾಟೀಲ್ ಅವರನ್ನು ಮಂತ್ರಿ ಮಾಡಲಿ ಎಂದು ಆಗ್ರಹಿಸಿದ್ದು, ಈ ನಡುವೆ ಕೇಂದ್ರದ ವರಿಷ್ಠರು ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಒಪ್ಪಿಗೆಯನ್ನೇ ನೀಡಿಲ್ಲ ಆದರೂ ಸಿಪಿವೈಗೆ ಸಚಿವ ಸ್ಥಾನ ನೀಡುವ ಬಗ್ಗೆ ಸ್ಪಷ್ಟನೆ ಬೇರೆ ನೀಡಿದ್ದಾರೆ ಎಂದು ಕಿಡಿಕಾರಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ