NEWSದೇಶ-ವಿದೇಶರಾಜಕೀಯ

ಬಿಜೆಪಿಗೆ ಭಾರಿ ಮುಖಭಂಗ:  ರಾಜಸ್ಥಾನ ವಿಶ್ವಾಸ ಗೆದ್ದ ಸಿಎಂ ಅಶೋಕ್ ಗೆಹ್ಲೋಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೆಬೆಲ್ ನಾಯಕ ಸಚಿನ್ ಪೈಲಟ್ ಅವರ ಬಂಡಾಯದಿಂದ ಅತಂತ್ರ ಸ್ಥಿತಿಗೆ ತಲುಪಿದ್ದ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸ ಗೆದ್ದು ಬೀಗಿದೆ.

ಶುಕ್ರವಾರ ನಡೆದ ರಾಜಸ್ಥಾನದ ವಿಶೇಷ ಅಧಿವೇಶನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರ ವಿಶ್ವಾಸ ಮತ ಅಗ್ನಿ ಪರೀಕ್ಷೆಗೆ ಸಿಲುಕಿತು. ಆ ವಿಶ್ವಾಸ ಮತಯಾಚನೆಯಲ್ಲಿ ಶಾಸಕರ ವಿಶ್ವಾಸ ಗೆಲ್ಲುವಲ್ಲಿ ಸಿಎಂ ಯಶಸ್ವಿಯಾಗಿ ಬೀಗಿದ್ದರೆ ಇತ್ತ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧರಿವಲ್  ಸರ್ಕಾರದ ಪರ ವಿಶ್ವಾಸ ಮಂಡನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿತು. ಆ ಭಾಗವಾಗಿ ಶಾಸಕರ ಕುದುರೆ ವ್ಯಾಪಾರ ಮಾಡಿ ಸರ್ಕಾರ ಉರುಳಿಸಿ ತನ್ನ ಸರ್ಕಾರ ರಚನೆಗೆ ಮುಂದಾಗಿತ್ತು ಆದರೆ ಅದಕ್ಕೆ ಶಾಸಕರೇ ತಕ್ಕ ಉತ್ತರ ನೀಡಿದ್ದಾರೆ ಎಂದು ಬಿಜೆಪಿಯ ಕಿಚಾಯಿಸಿದರು.

ಇನ್ನು ಮುಂದುವರಿದು ಮಾತನಾಡಿ ಅವರು ಮಧ್ಯ ಪ್ರದೇಶ, ಮಣಿಪುರ ಮತ್ತು ಗೋವಾದಲ್ಲಿ ಕೇಂದ್ರ ಬಿಜೆಪಿ ಇದೇ ಕೆಲಸ ಮಾಡಿತ್ತು. ರಾಜಸ್ಥಾನದಲ್ಲೂ ಅದೇ ಕಾರ್ಯಕ್ಕಾಗಿ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಆಡಳಿತರೂಢ ಸರ್ಕಾರವನ್ನು ಉರುಳಿಸುವ ಕಾರ್ಯಕ್ಕೆ ಮುಂದಾಗಿತ್ತು. ಆದರೆ ಈ ಕಾರ್ಯದಲ್ಲಿ ಬಿಜೆಪಿ ಸಫಲವಾಗಲಿಲ್ಲ. ರಾಜಸ್ಥಾನವನ್ನು ಸೋಲಿಸಲು ಬಂದ ರಾಜ ಅಕ್ಪರ್ ಮೇವಾಡದ ಒಗ್ಗಟ್ಟಿನ ಶಕ್ತಿಯಿಂದಾಗಿ ಮೊದಲ ಬಾರಿಗೆ ಸೋಲಿನ ಸಿಹಿ ಉಂಡಿದ್ದಾರೆ ಎಂದು ಕುಟುಕಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಶಾಸಕರ ವಿಶ್ವಾಸ ಗೆದ್ದ ಗೆಹ್ಲೋ ಟ್ ಗೆ 125 ಮತ
ಇನ್ನು ವಿಶ್ವಾಸ ಮತಯಾಚನೆಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಪರವಾಗಿ ರಾಜಸ್ಥಾನದ ಒಟ್ಟಾರೆ 200 ಸದಸ್ಯ ಬಲದ ಪೈಕಿ 125 ಶಾಸಕರು ಮತ ಚಲಾಯಿಸಿದ್ದಾರೆ.

ಸಿಎಂ ಗೆಹ್ಲೋಟ್  ಸಂತಸವನ್ನು ಹಂಚಿಕೊಂಡಿದ್ದು,  ಜನ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷ ರಾಜಸ್ಥಾನದಲ್ಲಿ ಸರ್ಕಾರ ರಚನೆ ಮಾಡಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ತನ್ನ ಎದುರಾಳಿಗಳನ್ನು ಹಣಿಯಲು ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ರಾಜಸ್ಥಾನ ವಿಧಾನಸಭೆ: ಸಂಖ್ಯಾ ಬಲ (200)

ಆಡಳಿತರೂಢ ಪಕ್ಷ ಕಾಂಗ್ರೆಸ್ : 107 (ಪೈಲಟ್ ಬೆಂಬಲಿಗರು-19,  ಬಿಎಸ್‌ಪಿ- 6)

ಆರ್‌ಎಲ್‌ಡಿ : 1

ಸ್ವತಂತ್ರರು: 13

ಬಿಟಿಪಿ : 2

ಎಡಪಕ್ಷ : 2

ಒಟ್ಟು: 125

ವಿರೋಧಪಕ್ಷ

ಬಿಜೆಪಿ : 72

ಆರ್‌ಎಲ್‌ಪಿ : 3

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?