NEWSಸಿನಿಪಥ

ಮಗನಿಗೆ ಜಾನಿ ಜಾನಿ ಎಸ್ ಪಪ್ಪಾ ಹೇಳಿಕೊಟ್ಟ ಯಶ್ – ವಿಡಿಯೋ ಹಂಚಿಕೊಂಡ ರಾಧಿಕಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟ ಯಶ್ ಮಗ ಯಥರ್ವ್‌ಗೆ ಜಾನಿ ಜಾನಿ ಎಸ್ ಪಪ್ಪಾ ಹೇಳಿಕೊಟ್ಟ ವಿಡಿಯೋ ಅನ್ನು ಸ್ಯಾಂಡಲ್‍ವುಡ್ ನಟಿ ಹಾಗೂ ಯಶ್‌ ಪತ್ನಿ ರಾಧಿಕಾ ಪಂಡಿತ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಗಾಗ ತಮ್ಮ ಮಕ್ಕಳ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ರಾಧಿಕಾ ಪಂಡಿತ್ ಯಶ್‍ ಮಗನಿಗೆ ರೈಮ್ಸ್‌ ಹೇಳಿಕೊಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಲಾಕ್‍ಡೌನ್ ಸಮಯದಲ್ಲಿ ರಾಕಿಂಗ್ ದಂಪತಿ ಮನೆಯಲ್ಲಿ ತಮ್ಮ ಮಕ್ಕಳ ಜತೆ ಕಾಲಕಳೆದಿದ್ದಾರೆ. ಈ ವೇಳೆ ರೆಕಾರ್ಡ್ ಮಾಡಿಕೊಂಡಿದ್ದ ಎರಡು ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರಾಧಿಕಾ ಆ ವಿಡಿಯೋಗೆ ‘ಲಾಕ್‍ಡೌನ್ ಡೈರೀಸ್’ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.

ವಿಡಿಯೋದಲ್ಲಿ ಯಶ್ ತಮ್ಮ ಮಗನಿಗೆ ‘ಜಾನಿ ಜಾನಿ ಎಸ್ ಪಪ್ಪಾ’ ರೈಮ್ಸ್‌ ಹೇಳಿಕೊಡುತ್ತಿದ್ದಾರೆ. ಕೊನೆಯಲ್ಲಿ ಅಪ್ಪನ ರೈಮ್ಸ್‌ ಗೆ ಯಥರ್ವ್ ಕೂಡ ಸಾಥ್ ಕೊಟ್ಟಿದ್ದಾನೆ. ಮತ್ತೊಂದು ವಿಡಿಯೋದಲ್ಲಿ ಇದೇ ರೈಮ್ಸ್‌ ಅನ್ನು ಯಶ್ ಮಗನಿಗೆ ಹೇಳಿಕೊಂಡಿದ್ದಾರೆ. ಈ ವೇಳೆ ಯಶ್ ಮಗಳು ಐರಾ ಕೂಡ ರೈಮ್ಸ್‌ ಹೇಳಿರುವುದನ್ನು ನೋಡಹುದು.

ರಾಧಿಕಾ ಅಪ್ಲೋಡ್ ಮಾಡಿರುವ ವಿಡಿಯೋಗೆ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಲಾಕ್‍ಡೌನ್ ಫ್ರೀ ಆದ ನಂತರ ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ಉಡುಪಿಯ ಮಲ್ಪೆಯಲ್ಲಿ ನಡೆಯುತ್ತಿದೆ. ಕಪ್ಪು ಬಣ್ಣದ 8-10 ಕಾರುಗಳು, ಅರಬ್ಬಿ ಸಮುದ್ರದ ತಟದಲ್ಲಿ ಐದಾರು ಬೋಟುಗಳು, ಬ್ರೌನ್ ಅಂಡ್ ವೈಟ್ ಡ್ರೆಸ್‍ನಲ್ಲಿ ರಾಕಿಂಗ್ ಸ್ಟಾರ್ ಯಶ್ ಮಿಂಚಿದ್ದಾರೆ. ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಪ್ರಶಾಂತ್ ನೀಲ್ ಬೆಟಾಲಿಯನ್ ಉಡುಪಿ ಜಿಲ್ಲೆ ಮಲ್ಪೆ ಸಮೀಪದ ಪಡುಕೆರೆ ಕಡಲಕಿನಾರೆಯಲ್ಲಿ ಶೂಟಿಂಗ್ ನಡೆಸುತ್ತಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ