NEWSನಮ್ಮಜಿಲ್ಲೆರಾಜಕೀಯ

ಬೀಡನಹಳ್ಳಿ ಗ್ರಾಪಂ 2ನೇ ವಾರ್ಡ್‌ನ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಯಶೋಧಮ್ಮ ಗೆಲುವು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ತಿ. ನರಸೀಪುರ ತಾಲೂಕಿನ ಬೀಡನಹಳ್ಳಿಯ ಎರಡನೇ ವಾರ್ಡ್‌ನಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಯಶೋಧಮ್ಮ ವಿರಭದ್ರಶೆಟ್ಟಿ 202 ಮತಗಳನ್ನು ಪಡೆದು 89 ಅಂತರದಲ್ಲಿ ಜಯಗಳಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಲಕ್ಷ್ಮಮ್ಮ ನಂಜುಂಡಶೆಟ್ಟಿ 112 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಚಾಮರಾಜನಗರದ ಹನೂರು ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಯಲ್ಲಿ ಪ್ರಮೀಳಾ ಎಂಬ ಅಭ್ಯರ್ಥಿ ಒಂದು ಮತದಿಂದ ಗೆದ್ದಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕ್ಕಕೇರಿಯಿಂದ ಕಣಕ್ಕಿಳಿದಿದ್ದ ಸಿ. ಬಿ. ಅಂಬೋಜಿ 414 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಡಿಸೆಂಬರ್ 27ರಂದು ಅಂಬೋಜಿ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಾಲೂರು ಗ್ರಾಮ ಪಂಚಾಯಿತಿ ಬಿಜೆಪಿ ಪಾಲಾಗಿದೆ. ಕಳೆದ ಚುನಾವಣೆಯಲ್ಲಿ ಒಂದು ಸ್ಥಾನದಲ್ಲಿಯೂ ಬಿಜೆಪಿ ಗೆದ್ದಿರಲಿಲ್ಲ. ಈ ಬಾರಿ 8 ಸ್ಥಾನಗಳ ಪೈಕಿ 5ರಲ್ಲಿ ಬಿಜೆಪಿ ಜಯಗಳಿಸಿದೆ.

ಉಡುಪಿ ಜಿಲ್ಲೆ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ. ಬಿಜೆಪಿ ಬೆಂಬಲಿತ 140, ಕಾಂಗ್ರೆಸ್ ಬೆಂಬಲಿತ 41, ಎಸ್ ಡಿ ಪಿ ಐನ ಇಬ್ಬರಿಗೆ ಗೆಲುವು.

ಕೋಲಾರದ ಬಂಗಾರಪೇಟೆ ತಾಲೂಕಿನ ಮತ ಎಣಿಕೆ ವೇಳೆ ಟಾಸ್ ಹಾಕಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಅಭ್ಯರ್ಥಿ ಅರುಣ್ ರೆಡ್ಡಿ ಎಳೇಸಂದ್ರ ಗ್ರಾಮ ಪಂಚಾಯಿತಿಯ ದಿನ್ನೇಕೊತ್ತೂರು ಗ್ರಾಮದಿಂದ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಗಳು ತಲಾ 106 ಮತ ಪಡೆದಿದ್ದರಿಂದ, ತಹಶೀಲ್ದಾರ್ ದಯಾನಂದ್ ಸಮ್ಮುಖದಲ್ಲಿ ಟಾಸ್ ಹಾಕಲಾಯಿತು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ