CrimeNEWSರಾಜಕೀಯ

ಜಿಪಂ ಸದಸ್ಯನ ಹತ್ಯೆ ಪ್ರಕರಣ- ಸಿಬಿಐ ನಿಷ್ಪಕ್ಷಪಾತ ತನಿಖೆ ನಡೆಸಲಿ: ಮಾಜಿ ಸಿಎಂ ಎಚ್‍ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಇದೇ ವೇಳೆ ಪ್ರಕರಣದ ವಿಚಾರವಣೆಯನ್ನು ರಾಜಕೀಯ ಪ್ರಭಾವಕ್ಕೆ ಒಳಗಾಗದೇ ಸಿಬಿಐ ತನಿಖೆ ನಡೆಸಲಿ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಹಳೆಯ ಪ್ರಕರಣವನ್ನು ತನಿಖೆ ನಡೆಸಿ ಕ್ರಮಕೈಗೊಳ್ಳಲು ಮುಂದಾದರೇ ರಾಜಕೀಯ ನಾಯಕರಾದ ನಾವು ಅದನ್ನು ರಾಜಕೀಯ ಪ್ರೇರಿತ ಎಂದು ಹೇಳಿ ಶೆಲ್ಟರ್ ಪಡೆದುಕೊಳ್ಳಲು ಯತ್ನಿಸುತ್ತೇವೆ. ಇದೇನೆ ಇರಲಿ ಪ್ರಾಮಾಣಿಕವಾಗಿ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ನೊಂದವರಿಗೆ ಸೂಕ್ತ ನ್ಯಾಯಕೊಡಿಸಬೇಕು ಎಂದರು.

ಯೋಗೇಶ್ ಗೌಡ ಪ್ರಕರಣದಲ್ಲಿ ಸಾರ್ವಜನಿಕವಾಗಿ ಹಲವಾರು ಗುಮಾನಿ ಇತ್ತು. ಬಿಜೆಪಿ ಸರ್ಕಾರ ಬಂದು ತನಿಖೆಗೆ ಕೊಟ್ಟಿತ್ತು. ಪ್ರಕರಣದಲ್ಲಿ ನಿಜವಾದ ಸತ್ಯಾಸತ್ಯತೆ ಹೊರ ಬರಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆ ಮಾಡಬೇಕು. ಆದರೆ ನನಗೆ ವಿನಯ್ ಕುಲಕರ್ಣಿ ಬಿಜೆಪಿಗೆ ಸೇರಲು ಹೊರಟಿದ್ರಾ ಎಂಬುವುದು ನನಗೆ ಗೊತ್ತಿಲ್ಲ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾತ್ರ ತಿಳಿದಿರುತ್ತದೆ ಎಂದರು.

ಶಿರಾದಲ್ಲಿ ನಾವೇ ಗೆಲ್ತೀವಿ
ಇದೇ ವೇಳೆ ಉಪಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್‍ಡಿಕೆ, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಚುನಾವಣೆಯಲ್ಲಿ ಗೆಲುವು ಪಡೆದಿದ್ದೇವೆ ಎಂದು ಹೇಳುತ್ತಿದ್ದಾರೆ. ಚುನಾವಣೆ ಫಲಿತಾಂಶದ ನಂತರ ಸಿಎಂ, ವಿಪಕ್ಷ ಸ್ಥಾನ ಬದಲಾಗುತ್ತೆ ಅಂತಾ ಚರ್ಚೆ ಆಗುತ್ತಿದೆ. ಸಿಎಂ ಪುತ್ರ 25 ಸಾವಿರ ಮತದಲ್ಲಿ ಗೆದ್ದಿದ್ದೇವೆ ಅಂತಾರೆ. ಇಬ್ಬರ ಮಾತು ಕೇಳಿದ್ರೆ ನಾವು ಮೂರನೇ ಸ್ಥಾನಕ್ಕೆ ಬರುತ್ತೀವಾ ಅನ್ನಿಸುತ್ತಿದೆ. ಆರ್‍ಆರ್ ನಗರದಲ್ಲಿ ನಮ್ಮ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದು, ಗೆಲುವಿನ ಹತ್ತಿರಕ್ಕೆ ಹೋಗ್ತೀವಿ. ಇನ್ನು ಯಾರು ಏನೇ ಹೇಳಲಿ, ಏನೇ ಮಾಡಲಿ ಶಿರಾದಲ್ಲಿ ನಾವು ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ