NEWSಕೃಷಿನಮ್ಮರಾಜ್ಯ

ಅಕ್ರಮ ಎಸಗಿದರೆ ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿರುದ್ಧ ಕ್ರಮ

ಸೋಂಪುರ ಹೋಬಳಿಯಲ್ಲಿ ಸಂಚರಿಸಿದ  ಆಹಾರ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಗೊಳಗಾಗದೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ವಿವಿಧ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ    ದಿಢೀರ್ ಭೇಟಿ, ಪಡಿತರ ವಿತರಣೆಯಲ್ಲಿ ಆಗುತ್ತಿರುವ ಲೋಪಗಳನ್ನು  ಪರಿಶೀಲಿಸಿ ಅಂಗಡಿಗಳ ಮಾಲೀಕರಿಗೆ ಈ ಎಚ್ಚರಿಕೆ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಹೊನ್ನೇನಹಳ್ಳಿ, ಬಿಲ್ಲಿನಕೋಟೆ ಹಾಗೂ ಶಿವಗಂಗೆ ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ಸಚಿವರು ಸಮರ್ಪಕ ಪಡಿತರ ವಿತರಣೆ ಜೊತೆಗೆ ವಲಸೆ ಬಂದಿರುವ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಸಹ ಅವರ ಆಧಾರ್ ಕಾರ್ಡ್ ನ ವಿವರ ಪಡೆದು ಪಡಿತರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರು ವಿತರಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಂದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ದೂರು ಹಿನ್ನೆಲೆ, ಭೇಟಿ ನೀಡಲಾಗುತ್ತಿದ್ದು, ತೂಕ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಬಡವರಿಗೆ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ರಾಜ್ಯದ ಕಟ್ಟೆಕಡೆಯ ವ್ಯಕ್ತಿಯ ಹಸಿವು ನಿಗಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ವ್ಯಕ್ತ್ತಿಗಳಿಗೆ ಪಡಿತರ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುತ್ತಿದ್ದು, ಪ್ರತಿಯೊಬ್ಬರಿಗೂ 2 ಕೆಜಿ ಕಡಲೆಕಾಳು ಹಾಗೂ ರಾಗಿ ವಿತರಣೆ ಮಾಡುವ ಚಿಂತನೆ ಸರ್ಕಾರ ಹೊಂದಿದ್ದು, ಜೂನ್ ತಿಂಗಳಿಂದ ನೂತನ ಯೋಜನೆ ಜಾರಿಯಾಗಲಿದೆ ಎಂದು ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ  ಸುಬ್ರಹ್ಮಣ್ಯ, ನೆಲಮಂಗಲ ತಾಲೂಕು ತಹಸೀಲ್ದಾರ್ ಶ್ರೀನಿವಾಸಯ್ಯ ಹಾಗೂ  ಇತರರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್