NEWSರಾಜಕೀಯಸಂಸ್ಕೃತಿ

ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ: ಯುವನಟ ನಿಖಿಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮದೇ ನಾಡಿನಲ್ಲಿ ನಮ್ಮ ನೆಲದ ಕ್ರಾಂತಿವೀರರ ಪ್ರತಿಮೆ ಸ್ಥಾಪನೆಗೆ ವಿರೋಧ ಮಾಡುವುದು ಕನ್ನಡಿಗರ ಸ್ವಾಭಿಮಾನ ಹಾಗೂ ಸಹನೆಯನ್ನು ಕೆಣಕಿದಂತೆಯೇ ಎಂದು ಯುವನಟ ನಿಖಿಲ್ ಕುಮಾರಸ್ವಾಮಿ ಪುಂಡರ ವಿರುದ್ಧ ಕಿಡಿಕಾರಿದ್ದಾರೆ.

ನಿಖಿಲ್ ಟ್ವೀಟ್ ಮಾಡುವ ಮೂಲಕ ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ?” ಎಂದು ನಿಖಿಲ್ ಪ್ರಶ್ನೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪುಂಡಾಟಿಕೆ ಮಾಡುತ್ತಿರುವ ಕೆಲವು ಸಂಘಟನೆಗಳನ್ನು ಸರ್ಕಾರ ಕೂಡಲೇ ಮಟ್ಟ ಹಾಕಬೇಕು ಎಂದು ನಿಖಿಲ್ ಆಗ್ರಹಿಸಿದ್ದಾರೆ.

ನಮ್ಮದೇ ನಾಡಿನಲ್ಲಿ ನಮ್ಮ ನೆಲದ ಕ್ರಾಂತಿವೀರರ ಪ್ರತಿಮೆ ಸ್ಥಾಪನೆಗೆ ವಿರೋಧ ಮಾಡುವುದು ಕನ್ನಡಿಗರ ಸ್ವಾಭಿಮಾನ ಹಾಗೂ ಸಹನೆಯನ್ನು ಕೆಣಕಿದಂತೆಯೇ. ಮುಖ್ಯಮಂತ್ರಿಗಳು ಈ ಬಗ್ಗೆ ವಿಶೇಷ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ” ಎಂದು ನಿಖಿಲ್ ಟ್ವೀಟ್ ಮಾಡಿದ್ದಾರೆ.

ಪ್ರತಿಮೆ ಪ್ರತಿಷ್ಠಾಪನೆಗೆ ಎಂಇಎಸ್ ಪುಂಡರ ಕ್ಯಾತೆ
ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. ಪೀರನವಾಡಿಯಲ್ಲಿ ಈಗಾಗಲೇ ಶಿವಾಜಿ ಮೂರ್ತಿ ಇದೆ. ಆದರೂ ರಾಯಣ್ಣ ಪ್ರತಿಮೆ ಈ ಜಾಗದಲ್ಲಿ ಬೇಡ ಅನ್ನೋದು ಈ ಪುಂಡರ ಒತ್ತಾಯ. ಇದಕ್ಕೆ ಒಪ್ಪದ ರಾಯಣ್ಣ ಬೆಂಬಲಿಗರು ಶುಕ್ರವಾರ ಬೆಳಗ್ಗಿನ ಜಾವ ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪೊಲೀಸರು ಲಾಠಿಚಾರ್ಜ್ ಕೂಡ ಮಾಡಿದ್ದರು.

ಕೊನೆಗೆ ನಮ್ಮ ನೆಲದಲ್ಲೇ, ನಮ್ಮ ನಾಡ ವೀರಪುತ್ರ, ವೀರಕನ್ನಡಿಗ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದಕ್ಕೆ 20 ಕನ್ನಡಿಗರ ಮೇಲೆ ಕೇಸ್ ಬಿದ್ದಿದೆ. ಅದು ಗಲಭೆ, ಅನುಮತಿ ಇಲ್ಲದೆ ಪ್ರವೇಶ, ಮಾರಕಾಸ್ತ್ರಗಳೊಂದಿಗೆ ಗಲಭೆ ನಡೆಸಿದ್ದ ಕೇಸ್ ಹಾಕಲಾಗಿದೆ.

1 Comment

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?