ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಅವರು ಪ್ರಮಾಣವಚನ ಸ್ವೀಕರಿಸಿದರು.

ಇಂದು ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, 10ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಗಳಿಸಿದ ಬಳಿಕ ನಿತೀಶ್ ಕುಮಾರ್ ಅವರು ಇಂದು ಬೆಳಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಎನ್‌ಡಿಎ ನೇತೃತ್ವದ ಹೊಸ ಸರ್ಕಾರ ರಚನೆ ಆಗುತ್ತಿದೆ.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಆಮಿತ್ ಶಾ, ಬಿಜೆಪಿ ಅಧ್ಯಕ್ಷ ಜಿ.ಪಿ.ನಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆಂಧ್ರ ಸಿಎಂ ಚಂದ್ರಬಾಯಿ ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಘಟಾನುಘಟಿ ನಾಯಕರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.
Related


Megha








