NEWSನಮ್ಮರಾಜ್ಯಸಂಸ್ಕೃತಿ

ಕನ್ನಡ ಭಾಷೆಗೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ : ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಏಲಕ್ಕಿ ನಾಡು ಹಾವೇರಿಯಲ್ಲಿ ಶುಕ್ರವಾರ (ಜ.6) 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೂ ಸಹ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ. ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕಂದರೇ ಇದುವರೆಗೆ ನಡೆದು ಬಂದ ದಾರಿಯ ಸಿಂಹಾವಲೋಕನ ಮಾಡಬೇಕಾಗುತ್ತದೆ. ಆಗ ಅದು ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದರು.

ಕನ್ನಡ ಇಡೀ ಜಗತ್ತಿನಲ್ಲಿ ಅತ್ಯಂತ ಪ್ರಾಚೀನ ಭಾಷೆ. ಇದರರ್ಥ ಕನ್ನಡಿಗರ ಬದುಕು ಪುರಾತನ ಹಾಗೂ ಶ್ರೇಷ್ಠ. ಜಗತ್ತಿನಲ್ಲಿ ಕನ್ನಡ ಸಂಸ್ಕೃತಿ ಅತ್ಯಂತ ಪವಿತ್ರ ಮತ್ತು ಪುರಾತನ. ಇಂಥ ಕನ್ನಡದ ಕಂಪು ಭಾರತದಲ್ಲಿ ಮತ್ತೆ ಹೆಮ್ಮರವಾಗಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಇನ್ನು ಇಬ್ಬರು ಸರಸ್ವತಿ ಸಮ್ಮಾನ್ ಪುರಸ್ಕೃತರು ಸಹ ನಮ್ಮ ಕನ್ನಡ ನಾಡಿನಲ್ಲಿರುವುದು ವಿಶೇಷವಾಗಿದೆ ಎಂದ ಅವರು, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ ಮತ್ತು ಹುಟ್ಟುವುದೂ ಇಲ್ಲ ಎಂದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ