NEWSನಮ್ಮಜಿಲ್ಲೆನಮ್ಮರಾಜ್ಯ

ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿ ಜಾರಿಯಾದರೆ ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂಬ ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.

ಮಂಗಳವಾರ (ಡಿ.26) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಐದನೆಯ ಗ್ಯಾರಂಟಿಯಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ? ನೀವು ಮಾತಿಗೆ ತಪ್ಪಿದ ಮೋದಿ ಆಗಿದ್ದೀರಿ ಎಂದು ಹರಿಹಾಯ್ದರು.

ಇನ್ನು ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ. ಮೋದಿಯವರೇನು ಆರ್ಥಿಕ ತಜ್ಞರಾ? ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಭಾಷಣ ಮಾಡಿದ್ರು. ಈಗ ಐದೂ ಯೋಜನೆ ಜಾರಿಯಾಗಿ ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ ನೋಡ ಬನ್ನಿ ಎಂದು ಹೇಳಿದರು.

ವಿವೇಕಾನಂದ ಜಯಂತಿಯಂದು ಲಕ್ಷಾಂತರ ಯುವಕ ಯುವತಿಯರ ಸಮ್ಮುಖದಲ್ಲಿ ಯುವನಿಧಿಯನ್ನು ನೇರವಾಗಿ ಅರ್ಹರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ನಡೆಸುತ್ತೇವೆ. ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನೂ ಭರ್ತಿ ಮಾಡಲಾಗುವುದು. ಮಾತು ತಪ್ಪಿದ ಮೋದಿಯವರೇ ನಿಮ್ಮ ಮಾತು ಏನಾಯ್ತು ಎಂದು ರಾಜ್ಯದ ಯುವ ಸಮೂಹ ನಿಮ್ಮನ್ನು ಪ್ರಶ್ನಿಸುತ್ತಿದೆ ಇದಕ್ಕೆ ಉತ್ತರ ಕೊಡುತ್ತೀರಾ ಎಂದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ