Please assign a menu to the primary menu location under menu

NEWSನಮ್ಮಜಿಲ್ಲೆ

ನ.27 “ನಿಧಿ ಆಪ್ಕೆ ನಿಕಟ್” ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗು ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘ, ಚಿಕ್ಕಬಳ್ಳಾಪುರ ವತಿಯಿಂದ ಇಪಿಎಸ್ ಪಿಂಚಣಿದಾರರ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮ ನವೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಲಿದೆ.

ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯ ಸಂಯೋಜಕ ರಮಾಕಾಂತ ನರಗುಂದ ಹಾಗೂ ರಾಜ್ಯಾಧ್ಯಕ್ಷರಾದ ಜಿಎಸ್ಎಂ ಸ್ವಾಮಿ ಹಾಗೂ ನಮ್ಮ ಸಂಘದ ಮುಖಂಡರು, ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಇಪಿಎಸ್ ನಿವೃತ್ತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಂತಿಯುತ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸುವ ಸಭೆಯಲ್ಲಿ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ಕಾರ್ಯಕಾರಿ ಸಮಿತಿ ಪರವಾಗಿ ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ವಿನಂತಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್