NEWSನಮ್ಮರಾಜ್ಯರಾಜಕೀಯ

ಅಧಿವೇಶದನದಲ್ಲಿ ಆಡಳಿತ ಪಕ್ಷವನ್ನು ಕಟ್ಟಿ ಹಾಕಬೇಕಿರುವ ಬಿಜೆಪಿಯೇ ಸಂಕಷ್ಟದಲ್ಲಿ…!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶದಲ್ಲಿ ಕಳೆದ 9 ವರ್ಷದಿಂದ ಅಧಿಕಾರ ಹಿಡಿದಿರುವ ಬಿಜೆಪಿ ರಾಜ್ಯದಲ್ಲೂ ಕಳೆದ ಬಾರಿ ಅಧಿಕಾರ ಅನುಭವಿಸಿದೆ. ಆದರೆ, ಇಂದಿನ ಸ್ಥಿತಿ ನೋಡಿದರೆ ಅಯ್ಯೋಪಾಪ ಎನಿಸುತ್ತಿದೆ.

ಹೌದು! ಈ ಬಾರಿ ಬಿಜೆಪಯನ್ನು ಸರಿಸಿ ಅಧಿಕಾರವನ್ನು ನಾಡಿನ ಜನ ಕಾಂಗ್ರೆಸ್‌ಗೆ ಕೊಟ್ಟಿದ್ದಾರೆ. ಅಂದರೆ ಇವರನ್ನು ವಿಪಕ್ಷ ಸ್ಥಾನದಲ್ಲಿ ನೋಡಲು ಜನ ಇಚ್ಛೆಪಟ್ಟಿದ್ದಾರೆ. ಆದರೆ, ಈವರೆಗೂ ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರ ಮುಖಂಡರು ತಮ್ಮ ಪಕ್ಷದಲ್ಲಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಕೂರಿಸುವುದಕ್ಕೆ ಇನ್ನು ಸಾಧ್ಯವಾಗಿಲ್ಲ.

ಈ ಎಲ್ಲದರ ನಡುವೆಯೇ ಈಗಾಗಲೇ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ನಿನ್ನೆ (ಜು.3) ರಾಜ್ಯ ಪಾಲರು ಕೂಡ ಭಾಷಣ ಮಾಡಿದ್ದಾರೆ. ಆದರೆ, ಅಧಿವೇಶನ ಆರಂಭವಾಗಿದ್ದರೂ ಬಿಜೆಪಿಯಲ್ಲಿ ವಿಪಕ್ಷ ನಾಯಕ ಯಾರು ಎನ್ನುವುದೇ ಇನ್ನೂ ನಿಗೂಢವಾಗಿದೆ. ಇದು ಬಿಜೆಪಿಗೆ ತೀವ್ರ ಇರಿಸುಮುರಿಸು ಉಂಟುಮಾಡಿದೆ ಎನ್ನದೆ ಬೇರೆ ಪದವಿಲ್ಲ ಎನ್ನಬಹುದಾಗಿದೆ.

ಅಧಿವೇಶದನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ಅನ್ನು ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಈ ಜಂಜಾಟದ ನಡುವೆಯೂ ಇಂದು (ಜು.4) ವಿಪಕ್ಷದ ನಾಯಕನ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ, ಯಾರಿಗೆ ವಿಪಕ್ಷ ನಾಯಕನ ಪಟ್ಟ ಕಟ್ಟಲಾಗುತ್ತದೆ ಎನ್ನುವುದು ಇನ್ನೂ ಬಹಿರಂಗವಾಗಿಲ್ಲ.

ಇನ್ನು ಹೈಕಮಾಂಡ್​ ವಿಪಕ್ಷ ನಾಯಕನ ಆಯ್ಕೆ ಮಾಡಲು ವೀಕ್ಷಕರನ್ನು ನೇಮಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆಯ್ಕೆ ಮಾಡಲು ಕೇಂದ್ರೀಯ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದಾರೆ.

ವೀಕ್ಷಕರು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಹೈಕಮಾಂಡ್​ಗೆ ಮಾಹಿತಿ ನೀಡಲಿದ್ದಾರೆ. ಬಳಿಕ ಅಧಿಕೃತವಾಗಿ ವಿಪಕ್ಷ ನಾಯಕನ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.

 ರೇಸ್​ನಲ್ಲಿರುವ  ಕೇಸರಿ ಕಲಿಗಳು: ಮೂಲಗಳ ಪ್ರಕಾರ ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ, ಲಿಂಗಾಯತೇತರ ನಾಯಕರನ್ನು ನೇಮಿಸಿದರೆ ಹೇಗೆ ಎನ್ನುವ ಲೆಕ್ಕಾಚಾರಗಳನ್ನು ಹಾಕಿದೆ.

ಲಿಂಗಾಯತ ಸಮುದಾಯದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ರೇಸ್​ನಲ್ಲಿದ್ದಾರೆ. ಅಲ್ಲದೇ ಶಾಸಕ ಸುನಿಕ್ ಕುಮಾರ್ ಕೂಡ ವಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇನ್ನೂ ನಿಗೂಢವಾಗಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ