ಲಿಂಗ ಪೂಜೆಗಿಂತ ಕಾಯಕ ಶ್ರೇಷ್ಠವೆಂದವರಲ್ಲಿ ನುಲಿಯ ಚಂದಯ್ಯ ಮೊದಲಿಗ: ಮೋಹನ್ ರಾಜ್
ಪಿರಿಯಾಪಟ್ಟಣ: ಕಾಯಕ ನಿಷ್ಠೆ, ದಾಸೋಹ ಹಾಗೂ ಪ್ರಾಮಾಣಿಕತೆಗೆ ಹೆಸರಾದ ಶಿವಶರಣ ನುಲಿಯ ಚಂದಯ್ಯನವರು 12 ನೇ ಶತಮಾನದ ಸಕಲ ಶರಣರ ಪ್ರೀತಿಗೆ ಪಾತ್ರರಾಗಿದ್ದರು ಎಂದು ಕರ್ನಾಟಕ ಕೊರಮರ ಸಂಘದ ರಾಜ್ಯ ಸಂಘಟನಾಕಾರ ಮೋಹನ್ ರಾಜ್ ತಿಳಿಸಿದ್ದಾರೆ.
ಪಟ್ಟಣದ ತಾಲೂಕು ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಶಿವಶರಣ ನುಲಿಯ ಚಂದಯ್ಯ ನವರ 915 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿರುವ ಸಾಮಾಜಿಕ ಪರಿವರ್ತನಾ ಕ್ರಾಂತಿಯು 12 ನೇ ಶತಮಾನದಲ್ಲಿ ಬಸವಾದಿ ಪ್ರಮಥರಿಂದ ಕಾಯಕತತ್ವದ ಆಧಾರದಲ್ಲಿ ಜಾತಿ, ಲಿಂಗ, ಧರ್ಮವೆಂಬ ಭೇದಭಾವ ಇಲ್ಲದ ಶರಣರ ದಾಸೋಹದ ಮೂಲಕ ಕಾಯಕಗೈದವರು ಶರಣ ಶ್ರೀ ನುಲಿಯ ಚಂದಯ್ಯ.
ಅವರು ಬಸವಣ್ಣನವರ ಸಮಕಾಲೀನರಾಗಿದ್ದು, ಬಸವಣ್ಣನವರ ಜತೆ ಕೈಜೋಡಿಸಿದ ಪ್ರಮುಖ ಶರಣರಲ್ಲಿ ಒಬ್ಬರಾಗಿದ್ದರು. ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದ್ದಾರೆ. ಅವರು ವಿಜಾಪುರ ಜಿಲ್ಲೆಯ ಶಿವಣಗಿಯಲ್ಲಿ ಹುಟ್ಟಿದ್ದು, ಕಲ್ಯಾಣಕ್ಕೆ ಬಂದು, ಕಾಯಕ ದಾಸೋಹಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಇಷ್ಟಲಿಂಗದಲ್ಲಿ ಅತ್ಯುನ್ನತಿ ಕಂಡುಕೊಂಡರು.
ಮದ ಹುಲ್ಲಿನ ಹಗ್ಗ ಹೊಸೆಯುವ ಕಾಯಕ ಮಾಡಿ, ಅದರ ಮಾರಾಟದಿಂದ ಬಂದ ಆದಾಯದಿಂದ ಗುರು ಲಿಂಗ ಜಂಗಮ ಸೇವೆಗೆ ಬಳಸುತ್ತಿದ್ದರು. ಚಂದೇಶ್ವರಲಿಂಗ ಎಂಬ ಅಂಕಿತನಾಮದಲ್ಲಿ ಅವರು ರಚಿಸಿದ 48 ವಚನಗಳು ಲಭ್ಯವಾಗಿವೆ. ಚಂದಯ್ಯನವರದು ಬಹುಮುಖ ವ್ಯಕ್ತಿತ್ವವಾಗಿದ್ದು, ಅವರ ನಡೆ ನುಡಿ ಕಾಯಕನಿಷ್ಠ ಪುರಾಣ ಕಥೆಗಳಲ್ಲಿ ವರ್ಣಿತವಾಗಿವೆ.
ಚಂದಯ್ಯನವರು ಲಿಂಗ ಪೂಜೆಗಿಂತ ಕಾಯಕ ಶ್ರೇಷ್ಠವೆಂದು ನಂಬಿದ್ದರು. ಅತಿಯಾದ ಹಣ ಮನುಷ್ಯತ್ವಕ್ಕೆ ಮಾರಕ, ಮೈಮುರಿದು ದುಡಿದು ತಿನ್ನುವ ಆನಂದಕ್ಕೆ ಮತ್ತೊಂದು ಸರಿ ಸಾಟಿ ಇಲ್ಲ ಎಂದು ನುಡಿದು ಅದರಂತೆ ನಡೆದರು. ಆ ಸಮಾಜದಲ್ಲಿ ಹುಟ್ಟಿದ ನಾವು ಸಮಾಜದ ಏಳಿಗೆಗೆ ಕಿಂಚಿತ್ತಾದರೂ ಕೆಲಸ ಮಾಡಬೇಕಿದೆ.
ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಕೊರಮ ಜನಾಂಗವಿದ್ದು ವೈಜ್ಞಾನಿಕ ಗಣತಿಯಿಂದ ಇದು ಹೊರಬರಬರಬೇಕಾಗಿದೆ. ಸರ್ಕಾರ ತುಳಿತ್ತಕ್ಕೊಳಗಾದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಮೂಲಕ ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು.
1970 ರ ದಶಕದಲ್ಲಿ ಅರಸು ಮುಖ್ಯಮಂತ್ರಿಯಾಗಿದ್ದಾಗ ಮಾತ್ರ ಈ ಸಮುದಾಯವನ್ನು ಗುರುತಿಸಿ ನಾಲ್ವರನ್ನು ಶಾಸಕರನ್ನಾಗಿ ಒಬ್ಬರನ್ನು ಸಚಿವರನ್ನಾಗಿ ಮಾಡಿದ್ದು ಬಿಟ್ಟರೆ ಇಲ್ಲಿಯವರೆಗೂ ಈ ಸಮುದಾಯದವರು ವಿಧಾನಸಭೆಯ ಮೆಟ್ಟಿಲೇರಲು ಸಾಧ್ಯವಾಗಿಲ್ಲ. ಸರ್ಕಾರವು ಸಹ ಯಾರೊಬ್ಬರನ್ನು ವಿಧಾನ ಪರಿಷತ್ ಹಾಗೂ ನಿಗಮ ಮಂಡಳಿಗಳಿಗೆ ನೇಮಕ ಮಾಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಮೈಮುಲ್ ಅಧ್ಯಕ್ಷ ಪ್ರಸನ್ನ ಮಾತನಾಡಿ, ಈ ವರ್ಷದಿಂದ ಸರ್ಕಾರ ಶಿವಶರಣ ನುಲಿಯ ಚಂದಯ್ಯ ಅವರ ಜಯಂತಿಯನ್ನು ಸರಕಾರ ವತಿಯಿಂದ ಆಚರಣೆ ಮಾಡಲು ಆದೇಶ ಹೊರಡಿಸಿರುವುದು ಸಂತಸದ ವಿಷಯವಾಗಿದೆ. ಸಮಾಜದಲ್ಲಿ ಹಿಂದುಳಿದ ಸಮುದಾಯದ ಜನರು ಸಬಲರಾಗಬೇಕು ಎಂದರು.
ತಹಶೀಲ್ದಾರ್ ಕೆ.ಚಂದ್ರಮೌಳಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನವೀನ್ ಬುತನಹಳ್ಳಿ, ಗ್ರಾಪಂ ಸದಸ್ಯರಾದ ಹೊನ್ನಾಪುರ ಕಿರಣ್, ಸುಂಡವಾಳು ಮಹೇಶ್, ಚಂದ್ರಶೆಟ್ಟಿ, ಮಾಜಿ ಸೈನಿಕ ಲೋಕನಾಥ್, ನಿವೃತ್ತ ಪ್ರಾಂಶುಪಾಲ ಸತ್ಯನಾರಾಯಣ ತಾಲೂಕು ಕೊರಮ ಸಮಾಜದ ಮುಖಂಡರಾದ ದೊಡ್ಡಹರವೆ ಕುಮಾರ್, ಮುತ್ತುರಾಜ್, ಹಸುವಿನ ಕಾವಲು ಗೋವಿಂದರಾಜ್, ವಿಜಯ್ ವಿವಿಧ ಇಲಾಖೆಗಳ ಅಧಿಕಾರಿಗಳಾದ ಪ್ರೇಮ್ ಕುಮಾರ್, ಎಂ.ಕೆ.ಪ್ರಕಾಶ್, ಪ್ರಸಾದ್, ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.
Related
You Might Also Like
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...
ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು
ಹಾಸನ: ಬೆಳೆದು ನಿಂತಿದ್ದ ಭತ್ತವನ್ನು ಕಟಾವು ಮಾಡಿ ಗದ್ದೆಯಲ್ಲೇ ಚೀಲಕ್ಕೆ ತುಂಬಿಟ್ಟಿದ್ದ ಸುಮಾರು 60 ಕ್ವಿಂಟಲ್ ಭತ್ತವನ್ನು ಕಾಡಾನೆಗಳ ಹಿಂಡು ತಿಂದುಹಾಕಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟಮಾಡಿರುವ...
ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು
ಢಾಕಾ: ಮಧ್ಯಂತರ ಸರ್ಕಾರ ಬಾಂಗ್ಲಾದೇಶದಲ್ಲಿ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಹಿಂದೂ ದೇಗುಲಗಳ ಮೇಲೆ ದಾಳಿ ಮಾಡಿದ ಬಳಿಕ ಈಗ ಕ್ರಿಸ್ಮಸ್ ಸಂಭ್ರಮಾಚರಣೆ...
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು
ಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಶುಕ್ರವಾರ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ....
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ತುಂಬಿದ ಲಾರಿ ಡಿಕ್ಕಿ: ಹೊತ್ತಿ ಉರಿದ ಕ್ಯಾಂಟರ್- ಚಾಲಕರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಸಿಎನ್ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ...
KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ
ಬೆಂಗಳೂರು: 2024ರ ಜನವರಿ ಒಂದರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿ 1ರಿಂದ ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳುಗಳ ಹಿಂಬಾಕಿ ಕೊಡುವಂತೆ...
ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್
ಬೆಂಗಳೂರು: ಕಂಟ್ರ್ಯಾಕ್ಟರ್ಗೆ ಬಲೆ ಬೀಸಿ ಹನಿ ಟ್ರ್ಯಾಪ್ ಮಾಡಿರೋ ಸುಂದರಿಯ ಗ್ಯಾಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕಂಟ್ರ್ಯಾಕ್ಟರ್ ರಂಗನಾಥ್ ಎಂಬುವರು ಯುವತಿ ನಯನಾ...
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ
ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ನಾಲ್ಕು ವರ್ಷಕ್ಕೊಮ್ಮೆ ಸರ್ಕಾರದೊಂದಿಗೆ ಚೌಕಾಸಿ ನಡೆಸುವ ಬದಲು ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ...
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...