Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಅಡಿಕೆ ಆಮದು ವಿವಾದ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗಾರರಿಗೆ ನೆರವಾಗಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಈ ವೇಳೆ ಹಿರಿಯ ವಕೀಲರಾದ ಬ್ರಿಜೇಶ್‌ ಕಾಳಪ್ಪ ಹಾಗೂ ಕೆ.ದಿವಾಕರ್‌ ಇದ್ದರು.

ಈ ವೇಳೆ ಸುದ್ದಿಗಾಋರೊಂದಿಗೆ ಮಾತನಾಡಿದ ಪೃಥ್ವಿ ರೆಡ್ಡಿ, ಭಾರತಕ್ಕೆ 15,000 ಕ್ವಿಂಟಾಲ್‌ ಅಡಿಕೆಯನ್ನು ಆಮದು ಮಾಡಿಕೊಳ್ಳುವ ನಿರ್ಧಾರವು ಕರ್ನಾಟಕದ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳ ಅಡಿಕೆ ಬೆಳಗಾರರನ್ನು ಚಿಂತೆಗೀಡುಮಾಡಿದೆ. ಕಾಳಮೆಣಸು ಬೆಳಗಾರರಿಗೆ ಆದ ಅನ್ಯಾಯವು ಅಡಿಕೆ ಬೆಳಗಾರರಿಗೂ ಆಗಲಿದೆ ಎಂದು ತಿಳಿದ ನಂತರ ನಮ್ಮ ಪಕ್ಷವು ಇದನ್ನು ಗಂಭೀರವಾಗಿ ಪರಿಗಣಿಸಿದೆ.

ಆದರೆ ಕೇಂದ್ರ ಸರ್ಕಾರದ ಗಮನವನ್ನು ಈ ಸಮಸ್ಯೆಯತ್ತ ಸೆಳೆಯುವ ನಮ್ಮ ಪ್ರಯತ್ನವು ಯಶಸ್ವಿಯಾಗಲಿಲ್ಲ. ಆದ್ದರಿಂದ ಸಮಸ್ಯೆಯ ಗಂಭೀರತೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ನೀವು ಮಧ್ಯಪ್ರವೇಶಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಮೇಕ್‌ ಇನ್‌ ಇಂಡಿಯಾ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿಯವರು ಅದಕ್ಕೆ ವಿರುದ್ಧವಾಗಿ ವಿದೇಶದಲ್ಲಿ ಬೆಳೆದ ಅಡಿಕೆ, ಕಾಳುಮೆಣಸನ್ನು ಭಾರತಕ್ಕೆ ತರಿಸಿ, ʻಎಲ್ಲಾದರೂ ಬೆಳೆಯಿರಿ, ಭಾರತಕ್ಕೆ ತನ್ನಿʼ ಎಂಬ ನೀತಿಯನ್ನು ಅನುಸರಿಸುತ್ತಿರುವುದೇಕೆ? ರಾಜಕೀಯ ಪ್ರಭಾವಿಗಳು ಇದರಲ್ಲಿ ಭಾಗಿಯಾಗಿ ಸಫೆಮಾ, ಫೆರಾ ಮುಂತಾದ ನಿಯಮಗಳು ಉಲ್ಲಂಘನೆಯಾಗಿರುವುದು ಕಂಡುಬರುತ್ತಿದ್ದು, ಜಾರಿ ನಿರ್ದೇಶನಾಲಯದಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಎಎಪಿ ಮುಖಂಡರು ಹಾಗೂ ಹಿರಿಯ ವಕೀಲರಾದ ಬ್ರಿಜೇಶ್‌ ಕಾಳಪ್ಪ ಮಾತನಾಡಿ, “ನಮ್ಮಲ್ಲಿ ಬೆಳೆಯುವ ಅಡಿಕೆಗೆ ಹೋಲಿಕೆ ಮಾಡಿದರೆ ಭೂತಾನ್‌ನಿಂದ ಆಮದು ಮಾಡಿಕೊಳ್ಳುವ ಅಡಿಕೆಯು ಕಳಪೆ ಗುಣಮಟ್ಟದ್ದಾಗಿರಲಿದೆ. ಅದೇ ರೀತಿ, ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಆಮದು ಮಾಡಿಕೊಳ್ಳುವ ಕಾಳುಮೆಣಸು ನಮ್ಮಲ್ಲಿ ಬೆಳೆಯುವ ಕಾಳುಮೆಣಸಿಗಿಂತ ಕಳಪೆ ಗುಣಮಟ್ಟದ್ದಾಗಿದೆ.

ಇಲ್ಲಿನ ಉತ್ತಮ ಗುಣಮಟ್ಟದ ಬೆಳೆಗಳೊಂದಿಗೆ ಆಮದು ಮಾಡಿಕೊಂಡ ಅವುಗಳು ಮಿಶ್ರವಾಗುವುದರಿಂದ ಭಾರತದ ಅಡಿಕೆ ಹಾಗೂ ಕಾಳುಮೆಣಸು ಕಳಪೆ ಗುಣಮಟ್ಟದ್ದೆಂಬ ತಪ್ಪು ಕಲ್ಪನೆ ಗ್ರಾಹಕರಲ್ಲಿ ಮೂಡಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ವಾರ್ಷಿಕ 36,000 ಮೆಟ್ರಿಕ್‌ ಟನ್‌ ಕಾಳುಮೆಣಸು ಬೆಳೆಯಲಾಗುತ್ತಿದೆ. ಆಮದಿಗೂ ಮೊದಲು 850 ರೂಪಾಯಿಯಿದ್ದ ಬೆಲೆಯು 500 ರೂಪಾಯಿಗೆ ಕುಸಿದಿರುವುದರಿಂದ ಬೆಳೆಗಾರರಿಗೆ ಕೆಜಿಗೆ 350 ರೂಪಾಯಿ ನಷ್ಟವಾಗುತ್ತಿದೆ. ಅಂದರೆ ರೈತರಿಗೆ ಒಟ್ಟು 1.26 ಲಕ್ಷ ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಕಾಳುಮೆಣಸಿನ ಹಿಂದಿನ ಬೆಲೆಗೂ ಆಮದಿಗೆ ಅವಕಾಶ ನೀಡಿದ ನಂತರದ ಬೆಲೆಗೂ ಹೋಲಿಕೆ ಮಾಡಿದರೆ, ಗುತ್ತಿಗೆದಾರರು ಆರೋಪಿಸಿರುವಂತೆ 40% ಕಡಿಮೆಯಾಗಿರುವುದು ಗಮನಕ್ಕೆ ಬರುತ್ತದೆ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಎಎಪಿ ಮುಖಂಡರು ಹಾಗೂ ಹಿರಿಯ ವಕೀಲರಾದ ಕೆ.ದಿವಾಕರ್‌ ಮಾತನಾಡಿ, ದೇಶಕ್ಕೆ ಅಗತ್ಯವಿರುವಷ್ಟು ಅಡಿಕೆ ಹಾಗೂ ಕಾಳುಮೆಣಸು ನಮ್ಮಲ್ಲೇ ಉತ್ಪಾದನೆಯಾಗುತ್ತಿದ್ದರೂ ವಿದೇಶಗಳಿಂದ ಆಮದಿಗೆ ಮುಂದಾಗಿರುವುದು ಅವುಗಳ ಬೆಳೆಗಾರರನ್ನು ಸಹಜವಾಗಿಯೇ ಚಿಂತೆಗೀಡುಮಾಡಿದೆ.

ಒಂದುವೇಳೆ ಅಡಿಕೆ ಹಾಗೂ ಕಾಳುಮೆಣಸನ್ನು ಸರ್ಕಾರ ಆಮದು ಮಾಡಿಕೊಳ್ಳುವುದಾದರೆ, ಭಾರೀ ಮೊತ್ತದ ಆಮದು ಸುಂಕವನ್ನು ಇವುಗಳಿಗೆ ವಿಧಿಸಬೇಕು. ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿಯಾದ ಆಮದು ಸುಂಕ ನೀತಿ ಇಲ್ಲದಿರುವ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳಲು ಆಮದುದಾರರಿಗೆ ಅವಕಾಶ ನೀಡಬಾರದು” ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ