NEWSನಮ್ಮರಾಜ್ಯಬೆಂಗಳೂರು

ಹೈ ಕೋರ್ಟ್‌ ಸಿಜೆಯಾಗಿ ಎನ್‌.ವಿ. ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಯಾಗಿ ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗ್ಲಾಸ್​ ಹೌಸ್​ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ ವೀರಪ್ಪ ಮೊಯಿಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ವಕೀಲರು, ಗಣ್ಯರು ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...