CrimeNEWSನಮ್ಮಜಿಲ್ಲೆ

KKRTC: ಬಸ್‌, ಬೈಕ್‌ ನಡುವೆ ಅಪಘಾತ- ಇಬ್ಬರು ಬೈಕ್‌ ಸವಾರರು ಮೃತ

ವಿಜಯಪಥ ಸಮಗ್ರ ಸುದ್ದಿ

ಗದಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದು ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ನಡೆದಿದೆ.

ಸಾರಿಗೆ ಬಸ್ ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿತ್ತು. ಈ ವೇಳೆ ಮುಂಡರಗಿಯಿಂದ ಹಳ್ಳಿಗುಡಿಗೆ ಹೊರಟಿದ್ದ ಅಂದರೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ – ಬಸ್‌ ನಡುವೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಬೈಕ್​ ಸವಾರರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್