Vijayapatha - ವಿಜಯಪಥ > NEWS > Crime > KKRTC: ಬಸ್, ಬೈಕ್ ನಡುವೆ ಅಪಘಾತ- ಇಬ್ಬರು ಬೈಕ್ ಸವಾರರು ಮೃತ
ಗದಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದು ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ನಡೆದಿದೆ.
ಸಾರಿಗೆ ಬಸ್ ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿತ್ತು. ಈ ವೇಳೆ ಮುಂಡರಗಿಯಿಂದ ಹಳ್ಳಿಗುಡಿಗೆ ಹೊರಟಿದ್ದ ಅಂದರೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್ – ಬಸ್ ನಡುವೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಬೈಕ್ ಸವಾರರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Related
Deva
Leave a reply