NEWSನಮ್ಮರಾಜ್ಯ

NWKRTC ನೌಕರರಿಗೆ ಸೆ.30ರಂದು 15 ಸಾವಿರ ರೂ. ಹಬ್ಬದ ಮುಂಗಡ ಪಾವತಿಗೆ ಕ್ರಮ: ಎಂಡಿ ಪ್ರಿಯಾಂಗಾ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಸಂಸ್ಥೆಯ ನೌಕರರಿಗೆ ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಮುನ್ನವೇ ಸೆಪ್ಟೆಂಬರ್ ತಿಂಗಳ ವೇತನದಲ್ಲಿ 15 ಸಾವಿರ ರೂ.ಗಳನ್ನು ಮುಂಗಡವಾಗಿ ಸೆ.30ರಂದು ಪಾವತಿಸುವುದಾಗಿ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ತಿಳಿಸಿದ್ದಾರೆ.

ಹುಬ್ಬಳ್ಳಿಯ ಕೇಂದ್ರ ಕಚೇರಿಯಲ್ಲಿ ವಾಯುವ್ಯ ವಲಯ ನೌಕರರ ಕೂಟ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ನಾಡಹಬ್ಬ ದಸರಾ ನಿಮಿತ್ತ ವೇತನವನ್ನು 30.09.2025 ರಂದು ಪಾವತಿ ಮಾಡಲು ವಿನಂತಿಸಿ ಮನವಿಪತ್ರ ಸಲ್ಲಿಸಿದರು. ಈ ವೇಳೆ ವ್ಯವಸ್ಥಾಪಕ ನಿರ್ದೇಶಕರು ಸಕಾರಾತ್ಮಕವಾಗಿ ಸ್ಪಂದಿಸಿ ಸೆ.30 ರಂದು ವೇತನದ ಬದಲಾಗಿ 15000 ರೂ.ಗಳನ್ನು ಮುಂಗಡ ಪಾವತಿ ಮಾಡಲು ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು.

ರಾಜ್ಯದ ಅತಿದೊಡ್ಡ ನಾಡಹಬ್ಬವಾದ ನವರಾತ್ರಿ ಹಬ್ಬವು ಈಗಾಗಲೇ ಪ್ರಾರಂಭವಾಗಿದ್ದು, ಅಕ್ಟೋಬರ್ ತಿಂಗಳ ಒಂದನೇ ತಾರೀಖು ಆಯುಧ ಪೂಜೆ ಹಾಗೂ ಎರಡನೇ ತಾರೀಖು ವಿಜಯ ದಶಮಿಯಾಗಿದ್ದು, ಸಾರಿಗೆ ನೌಕರರು ಈ ಹಬ್ಬವನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ಭಕ್ತಿ ಮತ್ತು ಸಂಭ್ರಮದಿಂದ ಆಚರಣೆ ಮಾಡಲಾಗುವುದು.

ಈ ನಡುವೆ ನಮ್ಮ NWKRTC ಸಂಸ್ಥೆಯ ನೌಕರರಿಗೆ ವೇತನವು ತಿಂಗಳ 6ನೇ ತಾರೀಖು ಆಗುವುದರಿಂದ ನಮ್ಮ ನೌಕರರು ನಾಡಹಬ್ಬವನ್ನು ವೇತನವಿಲ್ಲದೆ ಆಚರಣೆ ಮಾಡಲು ಸಾಲ ಅಥವಾ ಇತರೆ ಮೂಲಗಳಿಂದ ಹಣವನ್ನು ಹೊಂದಿಸಿಕೊಳ್ಳುವ ಅನಿವಾರ್ಯ ಪರಿಸ್ಥಿತಿ ಬರುತ್ತದೆ.

ಈಗಾಗಲೇ ಕೆ.ಕೆ.ಆ‌ರ್.ಟಿ.ಸಿ. ಮತ್ತು ಕೆ.ಎಸ್.ಆರ್.ಟಿ.ಸಿ. ಸಾರಿಗೆ ನಿಗಮಗಳು ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಮುನ್ನವೇ ಸೆಪ್ಟೆಂಬರ್ ತಿಂಗಳ ವೇತನವನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, NWKRTC ಸಂಸ್ಥೆಯ ನೌಕರರು ಈ ಬಾರಿಯ ನಾಡಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಣೆ ಮಾಡಲು ಸೆಪ್ಟೆಂಬರ್ ತಿಂಗಳ ವೇತನವನ್ನು ಈ ತಿಂಗಳ ಕೊನೆಯ ದಿನವೇ ನೀಡಲು ಕ್ರಮವಹಿಸಬೇಕೆಂದು ಕೋರಿದ್ದರು.

ಮನವಿ ಸಲ್ಲಿಸುವ ವೇಳೆ ವಿ.ಜಿ. ಪೂಜಾರ, ವಿ.ವೈ. ಕಲ್ಲನ್ನವರ, ಆರ್‌.ಎಸ್‌. ಮಾವಿನಕಾಯಿ, ಈರಯ್ಯ ಕರಣ್ಣವರ ಇತರರು ಇದ್ದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ