NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ನೌಕರರ ಮೇಲೆ ಹಲ್ಲೆ ಮಾಡಿದರೆ ಕಠಿಣ ಕ್ರಮ – ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ ಬೆಳಗಾವಿ ಸಾರಿಗೆ ಡಿಸಿ

ವಿಜಯಪಥ ಸಮಗ್ರ ಸುದ್ದಿ
  • ನೌಕರರ ಮೇಲೆ ಹಲ್ಲೆ ಮಾಡಿದ ನಾಲ್ವರ ವಿರುದ್ಧ ಖುದ್ದುನಿಂತು FIR ದಾಖಲಿಸಿದ ಬೆಳಗಾವಿ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ಏ.25ರಂದು ಸಂಸ್ಥೆಯ ಬೈಲಹೊಂಗಲ ಘಟಕದ ಕರ್ತವ್ಯನಿರತ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಮತ್ತು ಅವರ ಸಂಬಂಧಿಕರು ಸೇರಿ ಏಕಾಏಕಿ ದೈಹಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈಯುವ ಮೂಲಕ ಚಾಲಕ, ನಿರ್ವಾಹಕರ ರ್ಕುವ್ಯಕ್ಕೆ ಅಡಿಪಡಿಸಿದ್ದರು.

ಅಲ್ಲದೆ ಈ ಮೂಲಕ ಸಾರ್ವಜನಿಕ ಪ್ರಯಾಣಿಕರಿಗೆ ಅನಾನುಕೂಲ ಉಂಟು ಮಾಡಿದ 3 ಜನ ಪುರುಷ ಒಬ್ಬ ಮಹಿಳೆ ಸೇರಿ 4 ಜನರ ವಿರುದ್ಧ ಬೈಲಹೊಂಗಲ ಪೊಲೀಸ್‌ಠಾಣೆಯಲ್ಲಿ ಸಂಸ್ಥೆಯಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಹಿಂದೆಯೂ ನಿಯೋಜಿತ ಮಾರ್ಗದ ಮೇಲೆ ಕರ್ತವ್ಯದ ನಿರ್ವಹಿಸುತ್ತಿದ್ದ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವುದು, ಅವಾಚ್ಯ ಶಬ್ದಗಳಿಂದ ಬೈಯುವ ಮತ್ತು ಹೆದರಿಸುವ ಹಾಗೂ ಸುಗಮ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ 2 ಪ್ರಕರಣಗಳಲ್ಲಿ ಈಗಾಗಲೇ ಎಫ್‌ಐಆರ್‌ ದಾಖಲಿಸಿ ಕಾನೂನು ಅಡಿಯಲ್ಲಿ ಶಿಕ್ಷೆಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಸಂಸ್ಥೆಯ ಚಾಲಕ, ನಿರ್ವಾಹಕರು ರಜಾ, ಹಬ್ಬ- ಹರಿದಿನಗಳು ಸೇರಿದಂತೆ ನಿರಂತರ ಹಗಲಿರುಳು ಶ್ರಮಪಡುತ್ತಿದ್ದಾರೆ. ಹೀಗಾಗಿ ಸಾರ್ವಜನಿಕ ಪ್ರಯಾಣಿಕರು ಸಾರಿಗೆ ಸಿಬ್ಬಂದಿಗಳೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ ಪ್ರಯಾಣಿಕರು ತಮ್ಮ ಏನೆ ದೂರು, ಕುಂದುಕೊರತೆಗಳಿದ್ದಲ್ಲಿ ಬಸ್‌ ನಿಉಲ್ದಾನದ ಅಧಿಕಾರಿ ಅವರಲ್ಲಿ ದೂರು ದಾಖಲಿಸಲು ಕೋರಿದ್ದಾರೆ. ಜತೆಗೆ ಈ ರೀತಿ ಶ್ರಮಪಟ್ಟು ಕೆಲಸ ನಿರ್ವಹಿಸುತ್ತಿರುವ ಚಾಲಕ, ನಿರ್ವಾಹಕ ಸಿಬ್ಬಂದಿಗಳ ಮೇಲೆ ಯಾವುದೇ ದೈಹಿಕ ಹಲ್ಲೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಇನ್ನುಮುಂದೆ ಈ ರೀತಿ ಕರ್ತವ್ಯದ ಮೇಲೆ ಇರುವ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಹಲ್ಲೆ, ಬೆದರಿಕೆ ಮತ್ತು ಕರ್ತವ್ಯಕ್ಕೆ ಅಡೆ-ತಡೆಯುಂಟು ಮಾಡುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಂದು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಈ ರೀತಿ ತಪ್ಪು ಮಾಡಿದವರಿಗೆ ಕಾನೂನಿನಡಿ ಸೂಕ್ತ ಕ್ರಮ ತೆಗೆದುಕೊಂಡರೆ ಸಂಸ್ಥೆಯ ಸಿಬ್ಬಂದಿಗಳು ಮತ್ತು ಪ್ರಯಾಣಿಕರ ನಡುವೆ ಉತ್ತಮ ಬಾಂಧವ್ಯ ಬೆಸೆದಂತಾಗುತ್ತದೆ.

ಹೀಗಾಗಿ ಈ ನಿಟ್ಟಿನಲ್ಲಿ ಬೆಳಗಾವಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ತೆಗೆದುಕೊಂಡಿರುವ ನಿರ್ಧಾರ ತಮ್ಮ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೇಲಿನ ಕಾಳಜಿಯನ್ನು ವ್ಯಕ್ತಪಡಿಸುತ್ತಿದೆ. ಇದೇ ರೀತಿ ನಾಲ್ಕೂ ನಿಗಮದ ಡಿಸಿಗಳು ಸೇರಿದಂತೆ ಪ್ರತಿಯೊಬ್ಬ ಅಧಿಕಾರಿಯೂ ನಿಷ್ಠೆಯಿಂದ ಕರ್ತವ್ಯ ಪಾಲನೆ ಮಾಡಿದರೆ ಎಂಥ ಸಮಸ್ಯೆ ಇದ್ದರೂ ಕೂಡ ಬೆಣ್ಣೆಯಲ್ಲಿ ಕೂದಲು ತೆಗೆದಷ್ಟೆ ಸಲಿಸಾಗುತ್ತದೆ. ಜತೆಗೆ ನೌಕರರು ಒತ್ತಡರಹಿತ ಸೇವೆ ಮಾಡಲು ಅನುಕೂಲವಾಗುತ್ತದೆ.

Leave a Reply

error: Content is protected !!
LATEST
ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ...