CrimeNEWS

NWKRTC: ರೀಲ್ಸ್ ಗುಂಗಿನಲ್ಲಿದ್ದ ಚಾಲಕ – ಎತ್ತಿನಗಾಡಿಗೆ ಬಸ್‌ ಡಿಕ್ಕಿ ಎತ್ತುಗಳು ಸಾವು, ಇಬ್ಬರು ರೈತರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾಗಿದ್ದು ಇಬ್ಬರು ರೈತರು ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ಈ ಘಟನೆ‌ ನಡೆದಿದ್ದು, ಅವಘಡದಲ್ಲಿ ಗಾಯಗೊಂಡಿರುವ ಇಬ್ಬರು ರೈತರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಬಸ್​​ ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೊರಟಿತ್ತು. ಈ ಸಮಯದಲ್ಲಿ ಬಸ್ ಚಾಲಕ ರೀಲ್ಸ್ ಮಾಡಲು ಮುಂದಾಗಿದ್ದಾನೆ. ಸಂಚಾರದ ವೇಳೆ ರೀಲ್ಸ್​ನಲ್ಲಿ ಮುಳುಗಿದ್ದ ಡ್ರೈವರ್​ ರಸ್ತೆಯಲ್ಲಿ ಅದರ ಪಾಡಿಗೆ ಸಾಗುತ್ತಿದ್ದ ಎತ್ತಿನಗಾಡಿ ಮತ್ತು ರೈತರನ್ನು ಗಮನಿಸದೆ ರೀಲ್ಸ್ ಗುಂಗಿನಲ್ಲಿ ಹೋಗಿ ಗಾಡಿಗೆ ಡಿಕ್ಕಿಹೊಡೆದಿದ್ದಾನೆ

ಇನ್ನು ಬಸ್​ ಎತ್ತಿನಗಾಡಿಯ ಹಿಂಬದಿಗೆ ಹೋಗಿ ಗುದ್ದಿದ ರಭಸಕ್ಕೆ ಎರಡು ಎತ್ತುಗಳು ಸ್ಥಳದಲ್ಲೇ ಕೊನೆಯುಸಿರೆಳೆದಿವೆ. ಇತ್ತ ಇಬ್ಬರು ರೈತರಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ