ಚಿಕ್ಕೋಡಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತೊಟ್ಟಿದ್ದು, ಕಾರು ಚಾಲನೆ ಮಾಡುತ್ತಿದ್ದ ಇಂಜಿನಿಯರ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿರ್ಮಲಾ ಅವಟೆ (60) ಮೃತರು ಎಂದು ಗುರುತಿಸಲಾಗಿದೆ. ವಾಹನ ಚಲಾಯಿಸುತ್ತಿದ್ದ ಚಿಕ್ಕೋಡಿ ಹೆಸ್ಕಾಂ ಸಹಾಯಕ ಇಂಜಿನಿಯರ್ ನೇಮಿನಾಥ ಅವಟೆ (43) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚಿಕ್ಕೋಡಿ ಠಾಣೆ ಡಿವೈಎಸ್ಪಿ ಗೋಪಾಲಕೃಷ್ಣಗೌಡ, ಸಿಪಿಐ ವಿಶ್ವನಾಥ ಚೌಗಲಾ, ಸಂಚಾರ ಠಾಣೆ ಪಿಎಸ್‌ಐ ರೂಪಾ ಗೂಡೋದ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related
You Might Also Like
ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ 2025ರ ಜನವರಿ 6ರಿಂದ ಜಾರಿಗೆ ಬರಲಿದೆ ಎಂದು ಸಂಸ್ಥೆಯ ನಿರ್ದೇಶಕರು (ಸಿ&ಜಾ)...
ಸಾರಿಗೆ ಕಾರ್ಮಿಕರ ಬೀದಿಗೆ ತಂದಿದ್ದು ಹೊಸ ಸಂಘಟನೆ ಮುಖಂಡ ನಾವಲ್ಲ: ಜಂಟಿ ಪದಾಧಿಕಾರಿ
ಬೆಂಗಳೂರು: ಕಾರ್ಮಿಕರು ಒಗ್ಗಟ್ಟಿಲ್ಲದೆ ಮುಷ್ಕರ ಆಗೋದಿಲ್ಲ ಎಂಬುದಕ್ಕೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಡಿ.31ರ ಮುಷ್ಕರ ಮುಂದೂಡಿರುವುದೇ ನಿದರ್ಶನವಾಗಿದೆ. ಇನ್ನು ಸಾರಿಗೆ ನೌಕರರ...
KSRTC: ಸಾರಿಗೆ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿದ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಇದೇ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ...
ಇಂದು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ತುರ್ತು ಸಭೆ ಕರೆದ ಸಿಎಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಇದೇ ಡಿ.31ರಿಂದ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಹಿನ್ನೆಲೆಯಲ್ಲಿ...
KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ?
ಬೆಂಗಳೂರು: ಡಿಸೆಂಬರ್ 31ರಿಂದ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಯೋಜಿತ ಅನಿರ್ದಿಷ್ಟಾವಧಿ ಮುಷ್ಕರ ತಡೆಯಲು ಸಾರಿಗೆ ಇಲಾಖೆ ಸಕ್ರಿಯವಾಗಿದೆ. ಈ ನಡುವೆ ವೇತನ ಹೆಚ್ಚಳ ಸೇರಿದಂತೆ...
NWKRTC: ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ- ಹುಬ್ಬಳ್ಳಿ ಸಾರಿಗೆ ನೌಕರರ ಒಕ್ಕೂಟ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಒಕ್ಕೂಟದ ಪದಾಧಿಕಾರಿಗಳು ಹುಬ್ಬಳ್ಳಿಯ ನಗರ ಸಾರಿಗೆ ಘಟಕ 1, ಗ್ರಾಮಾಂತರ ಘಟಕ 1, ಗ್ರಾಮಾಂತರ ಘಟಕ...
ದೆಹಲಿ ರೈತರ ಹೋರಾಟ ಬೆಂಬಲಿಸಿ ಬನ್ನೂರಿನಲ್ಲಿ ರೈತರು- ರೈತ ಮುಖಂಡರ ಪ್ರತಿಭಟನೆ
ಬನ್ನೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ...
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...
ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು
ಹಾಸನ: ಬೆಳೆದು ನಿಂತಿದ್ದ ಭತ್ತವನ್ನು ಕಟಾವು ಮಾಡಿ ಗದ್ದೆಯಲ್ಲೇ ಚೀಲಕ್ಕೆ ತುಂಬಿಟ್ಟಿದ್ದ ಸುಮಾರು 60 ಕ್ವಿಂಟಲ್ ಭತ್ತವನ್ನು ಕಾಡಾನೆಗಳ ಹಿಂಡು ತಿಂದುಹಾಕಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟಮಾಡಿರುವ...