ಗುಬ್ಬಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಮತ್ತು ಗೂಡ್ಸ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಚಾಲಕ ಸೇರಿ ಹಲವರು ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಗಾಯಗೊಂಡ ಚಾಲಕ ಮತ್ತು ಪ್ರಯಾಣಿಕರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗೂಡ್ಸ್ ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಾರಿಗೆ ಬಸ್ ಎಡಗಡೆಯಿಂದಲೇ ಚಲಿಸುತ್ತಿತ್ತು. ಆದರೆ, ಎದಿರುಗಡೆಯಿಂದ ಬಂದ ಗೂಡ್ಸ್ ಲಾರಿ ನೇರವಾಗಿ ಬಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುವುದು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.