ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ವಾಯವ್ಯ ರಸ್ತೆ ಸಾರಿಗೆ ನಿಗಮಮ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಕಲಘಟಗಿಯ ರಾಮನಾಳ ಸಮೀಪ ನಡೆದಿದೆ.
ಕುಮಟಾದಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ NWKRTC ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಬಸ್ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ಭೇಟಿನೀಡಿದ ಕುಮುಟಾ ಪೊಲೀಸರು ಪರಿಶೀಸಿ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.