CRIMENEWSನಮ್ಮಜಿಲ್ಲೆ

NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ

ವಿಜಯಪಥ ಸಮಗ್ರ ಸುದ್ದಿ

ಬ್ಯಾಡಗಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗಳ ನಡುವೆ ಸಿಲುಕಿ ಕಾಲೇಜು ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬ್ಯಾಡಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಬ್ಯಾಡಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪ್ರಯಾಣಿಕರು ಸಹಾಯಕ್ಕೆ ಧಾವಿಸಿ, ಆಟೋ ಮೂಲಕ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು.

ಬಸ್‌ ನಿಲ್ದಾಣದಲ್ಲಿ ರಿವರ್ಸ್‌ ತೆಗೆದುಕೊಳ್ಳುತ್ತಿದ್ದಾಗ ಅದೇ ಬಸ್‌ನಲ್ಲಿ ಇದ್ದ ವಿದ್ಯಾರ್ಥಿ ಇಳಿದು ಬೇರೊಂದು ಬಸ್‌ ಹತ್ತಲು ಓಡಿ ಹೋಗುತ್ತಿದ್ದಾಗ ಮತ್ತೊಂದು ಬಸ್‌ ಬಂದಿದೆ. ಈ ವೇಳೆ ಏರಡು ಬಸ್‌ಗಳ ಮಧ್ಯೆ ಸಿಲುಕಿ ಗಾಯಗೊಂಡಿದ್ದಾನೆ.

ಹಾವೇರಿ ನಂತರ ಮತ್ತೊಂದು ಘಟನೆ: ಇತ್ತೀಚೆಗೆ ಹಾವೇರಿ ಬಸ್‌ ನಿಲ್ದಾಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ನಿಲ್ದಾಣದ ಪ್ಲಟ್‌ಫಾರಂ ತಡೆಗೋಡೆ ದಾಟಿ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ 7 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆ ಂಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವ ಸಾರಿಗೆ ಬಸ್‌ಗಳು ಯಾವ ಸ್ಥಿತಿಯಲ್ಲಿವೆ ಎಂಬುದನ್ನು ತೋರಿಸುತ್ತವೆ.

ಅಲ್ಲದೆ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಬಸ್ ನಿಲ್ದಾಣಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂದು ಸಾರ್ವಜನಿಕರ ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ... ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ