NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ ವೀಕ್ಷಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಲೆಕ್ಕಾಧಿಕಾರಿ ತಿಳಿಸಿದ್ದಾರೆ.
ಇನ್ನು ಸಂಸ್ಥೆಯ ಎಲ್ಲ ವಿಭಾಗಗಳ ಅಧಿಕಾರಿ, ನೌಕರರು ತಮ್ಮ ಭವಿಷ್ಯ ನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ ನೋಡುವ ಹಾಗೂ ಪ್ರಿಂಟ್ ಪಡೆಯುವ ವ್ಯವಸ್ಥೆಯನ್ನು ಮಾಡಲು ಮುಖ್ಯ ಗಣಕ ವ್ಯವಸ್ಥಾಪಕರಿಗೆ ಲಿಖಿತವಾಗಿ ತಿಳಿಸಲಾಗಿತ್ತು. ಅದರಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಸಂಸ್ಥೆಯ ಎಲ್ಲ ವಿಭಾಗಗಳ ಅಧಿಕಾರಿಗಳು/ ನೌಕರರು 2024-25ನೇ ಸಾಲಿನ ಭವಿಷ್ಯ ನಿಧಿ / ಐಚ್ಛಿಕ ಭವಿಷ್ಯ ನಿಧಿ ಚೀಟಿಗಳನ್ನು ಹೋಸ್ಟ್ ಮಾಡಿ ಆನ್ಲೈನ್ ಮೂಲಕ ವೀಕ್ಷಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಆದ್ದರಿಂದ ಎಲ್ಲರೂ pfnwkrtc.in ವೆಬ್ ಸೈಟ್ ಅನ್ನು ತೆರೆದು ಅವರ ಪಿಎಫ್ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು dd/mm/yyyy ಮಾದರಿಯಲ್ಲಿ ನಮೂದಿಸಿ 2024-25ನೇ ಸಾಲಿನ ಭವಿಷ್ಯ ನಿಧಿ / ಐಚ್ಛಿಕ ಭ.ನಿ ಚೀಟಿಗಳನ್ನು ವೀಕ್ಷಿಸಬಹುದಾಗಿದೆ ಹಾಗೂ Print ಅನ್ನು ಸಹ ಪಡೆಯಬಹುದಾಗಿದೆ.
ಈ ವಿಷಯವನ್ನು ವಿಭಾಗದ ಎಲ್ಲ ಘಟಕಗಳಲ್ಲಿ. ವಿಭಾಗೀಯ ಕಾರ್ಯಾಗಾರಗಳಲ್ಲಿ ಹಾಗೂ ಪ್ರಾದೇಶಿಕ ಕಾರ್ಯಾಗಾರದಲ್ಲಿ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲ ಅಧಿಕಾರಿಗಳ ಹಾಗೂ ನೌಕರರ ಗಮನಕ್ಕೆ ತರಲು ಸೂಕ್ತ ಕ್ರಮವನ್ನು ಜರುಗಿಸಲು ತಿಳಿಸಿದ್ದಾರೆ.
ಮುಂದುವರಿದು 2024-25ನೇ ಸಾಲಿನಲ್ಲಿ ವಿಭಾಗಗಳಿಂದ ವರ್ಗಾವಣೆಗೊಂಡ ಹಾಗೂ F.W.C ಇತ್ಯರ್ಥಗೊಂಡ ಅಧಿಕಾರಿ / ನೌಕರರ ಭವಿಷ್ಯ ನಿಧಿ ಚೀಟಿಯನ್ನು ವಿಭಾಗಮಟ್ಟದಲ್ಲಿ ಬ್ಲಾಕ್ ಮಾಡಲು ಅವಕಾಶ ನೀಡಲಾಗಿದ್ದು ಅವುಗಳನ್ನು ಕಡ್ಡಾಯವಾಗಿ ಬ್ಲಾಕ್ ಮಾಡಬೇಕು ಎಂದು ತಿಳಿಸಿದ್ದಾರೆ.

ಈ ಸಂಬಂಧ ಕಾರ್ಯದರ್ಶಿ, ಭವಿಷ್ಯ ನಿಧಿ ನ್ಯಾಸ ಮಂಡಳಿ. ಕ.ರಾ.ರ.ಸಾರಿಗೆ ನಿಗಮ ಅವರಿಗೂ ಮಾಹಿತಿಗಾಗಿ ಕಳುಹಿಸಲಾಗಿದೆ. ಅಲ್ಲದೆ ಧರ್ಮದರ್ಶಿ, ಭವಿಷ್ಯ ನಿಧಿ ನ್ಯಾಸ ಮಂಡಳಿ, nwkrtc ಸಂಸ್ಥೆ ಅವರಿಗೂ ಮಾಹಿತಿಗಾಗಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Related


You Might Also Like
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯ ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಕರೆ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....