NEWSನಮ್ಮಜಿಲ್ಲೆನಮ್ಮರಾಜ್ಯ

NWKRTC ಹಾವೇರಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದ ಚಾಲಕರಿಂದ ₹26 ಸಾವಿರ ದಂಡ ವಸೂಲಿಗೆ ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದ ಎಲ್ಲ ಘಟಕದ ಚಾಲನಾ ಸಿಬ್ಬಂದಿಗಳು ನಗರ ಪ್ರದೇಶ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಮುಂದೆ ಇಂಥ ದೂರುಗಳು ಬರದಂತೆ ನಿಗಾವಹಿಸಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಾಕೀತು ಮಾಡಿದ್ದಾರೆ.

ಈ ಸಂಬಂಧ ವಿಭಾಗದ ಹಾವೇರಿ, ಹಿರೇಕೆರೂರು, ರಾಣೆಬೆನ್ನುರು ಹಾನಗಲ್, ಬ್ಯಾಡಗಿ ಮತ್ತು ಸವಣೂರು ಘಟಕದಲ್ಲಿ ಯಾರು ಸಂಚಾರ ನಿಯಮ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿದ್ದಾರೋ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಈ ಎಲ್ಲ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ವಿಭಾಗದ ಚಾಲನಾ ಸಿಬ್ಬಂದಿಗಳು ನಗರ ಪ್ರದೇಶ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವುದು ಕಂಡುಬರುತ್ತಿವೆ. ಹೀಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಾಡುವ ವಾಹನಗಳಿಗೆ ರಸ್ತೆ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ, ನಗರ ಪ್ರದೇಶ ಹಾಗೂ ಟೋಲ್‌ಗಳ ಹತ್ತಿರ ಕ್ಯಾಮರಾ ಅಳವಡಿಸಲಾಗಿದೆ.

ಆದರೆ, ವಿಭಾಗದ ಚಾಲನಾ ಸಿಬ್ಬಂದಿಗಳು ಪದೇಪದೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಾಡುತ್ತಿರುವ ಕುರಿತು ಪೊಲೀಸ್‌ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪ್ರಕರಣ ದಾಖಲಾಗುತ್ತಿದ್ದು, ಇದರಿಂದ ವಾಹನಗಳ ಅರ್ಹತಾ ನವೀಕರಣ ಮತ್ತು ವಾಹನಗಳ ವರ್ಗಾವಣೆ ಸಮಯದಲ್ಲಿ ತೊಂದರೆವುಂಟಾಗುತ್ತಿದೆ.

ಉದಾ: ಹಿರೇಕೆರೂರು ಘಟಕದ ವಾಹನ ಸಂಖ್ಯೆ ಕೆಎ 27 ಎಪ್-0787 ವಾಹನಕ್ಕೆ ಜೂನ್-2023 ತಿಂಗಳಲ್ಲಿ 33 ಸಾರಿ ದಂಡದ ಮೊತ್ತ 16500 ರೂ.ಗಳು ಹಾಗೂ ಕೆಎ 27 ಎಫ್-813 ವಾಹನಕ್ಕೆ 19 ಸಾರಿ ದಂಡದ ಮೊತ್ತ 9500 ರೂ.ಗಳು ಹಾಕಿ ಪ್ರಕರಣ ದಾಖಲಾಗಿದೆ.

ಅಲ್ಲದೆ ಹಾನಗಲ್ಲ ಘಟಕದ ವಾಹನ ಸಂಖ್ಯೆ ಕೆಎ 27 ಎಫ್-760 ವಾಹನಕ್ಕೆ 18-07-2024 ಮತ್ತು 25-04-2027 ರಂದು ಎರಡು ಸಾರಿ ಮೈಸೂರ ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ಆನಲೈನ್ ಪ್ರಕರಣ ದಾಖಲಾಗಿದೆ. ಇನ್ನುಳಿದಂತೆ ಬಂಕಾಪೂರ ಟೋಲ್ ಮುಖಾಂತರ ಕಾರ್ಯಾಚರಣೆಯಾಗುವ ವಿಭಾಗದ ಎಲ್ಲ ವಾಹನಗಳಿಗೂ ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಆನ್ ಲೈನ್ ಪ್ರಕರಣ ದಾಖಲಾಗಿದೆ.

ಹೀಗಾಗಿ ಈ ಮೇಲೆ ನಮೂದಿಸಿದ ವಾಹನಗಳ ಚಾಲಕರಿಗೆ ಈ ವಿಷಯದ ಕುರಿತು ತಿಳಿಸಿ ಸಂಬಂಧಪಟ್ಟ ಚಾಲನಾ ಸಿಬ್ಬಂದಿಗಳಿಂದ ದಂಡದ ಹಣ ಕಟ್ಟಿಸುವ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಿರುವ ಇನ್ನುಳಿದ ವಾಹಗಳ ಮೇಲೆ ದಾಖಲಾಗಿರುವ ಪ್ರಕರಣದ ಮಾಹಿತಿ ಪಡೆದುಕೊಂಡು ಆ ವಾಹನಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಮುಂದುವರಿದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಸಂಚರಿಸಿರುವ ವಾಹನಗಳ ಚಾಲನಾ ಸಿಬ್ಬಂದಿಗಳಿಗೆ ಸಂಚಾರ ನಿಯಮಗಳ ಬಗ್ಗೆ ಸೂಕ್ತ ತಿಳಿವಳಿಕೆ ನೀಡುವುದು ಹಾಗೂ ಈ ವಿಷಯದ ಕುರಿತು ಪೊಲೀಸ್‌ ಪ್ರಕರಣ ದಾಖಲಾದಲ್ಲಿ ಸಂಬಂಧಪಟ್ಟ ಚಾಲನಾ ಸಿಬ್ಬಂದಿಗಳಿಂದ ಪ್ರಕರಣ ಇತ್ಯರ್ಥ ಪಡಿಸಲು ಸೂಕ್ತ ಕ್ರಮ ವಹಿಸುವಂತೆ ಡಿಸಿ ಸೂಚಿಸಿ ಆದೇಶ ಹೊರಡಿಸಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು