NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಅಧಿವೇಶನದಲ್ಲಿ ಧ್ವನಿ ಎತ್ತಿ- ಹಾಲಿ, ಮಾಜಿ ಸಚಿವರಿಗೆ ಕೂಟದ ಪದಾಧಿಕಾರಿಗಳ ಮನವಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಸಾರಿಗೆ ನೌಕರರಿಗೆ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡಿಸುವ ಮೂಲಕ ಮತ್ತು 2021ರ ಏಪ್ರಿಲ್‌ ನಡೆದ ಮುಷ್ಕರದ ಸಮಯದಲ್ಲಿ ಆಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಮೇಲೆ ಒತ್ತಡ ತರುವಂತೆ ಧಾರವಾಡ ವಿಭಾಗದ ಸಾರಿಗೆ ನೌಕರರ ಕೂಟದ ವತಿಯಿಂದ ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಲಾಯಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಜಿ ಸಚಿವರನ್ನು ಭೇಟಿಯಾದ ಕೂಟದ ಪದಾಧಿಕಾರಿಗಳು ಅಧಿವೇಶನದಲ್ಲಿ ನಮ್ಮಪರ ಸರ್ಕಾರದ‌ ಗಮನ ಸೆಳೆಯಬೇಕು ಎಂದು ಕೇಳಿಕೊಂಡರು. ಆ ವೇಳೆ ಸಕರಾತ್ಮಕವಾಗಿ ಸ್ಪಂದಿಸಿದ ಅವರು ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.

ಇನ್ನು ಇದೇ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರಿಗೂ ಮನವಿ ಸಲ್ಲಿಸಿದ ಕೂಟದ ಪದಾಧಿಕಾರಿಗಳು ಈ ಅಧಿವೇಶನದಲ್ಲಾದರೂ ನಮ್ಮ ವೇತನ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ಸಿಹಿ ಸುದ್ದಿ ಕೊಡಿ ಎಂದು ಮನವಿ ಮಾಡಿದರು.

ಕಾರ್ಯಕ್ರಮ ಮುಗಿದ ಬಳಿಕ NWKRTC ವ್ಯವಸ್ಥಾಪಕ ನಿರ್ದೇಶಕರಾದ ಭರತ್ ಅವರನ್ನು ಭೇಟಿ ಮಾಡಿ ಉಳಿದ ವರ್ಗಾವಣೆ ಪ್ರಕ್ರಿಯೆಗಳನ್ನು ಸರಿಪಡಿಕೊಡಲು ಮನವಿ ಮಾಡಿದರು. ಕೂಟದ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಎಂಡಿ ಅವರು ಈ ತಿಂಗಳ ಒಳಗೇ ನೀವುಗಳೆಲ್ಲರೂ ನಿಮ್ಮ ನಿಮ್ಮ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತೀರಿ ಎಂಬ ಭರವಸೆ ನೀಡಿದರು. ಹೀಗಾಗಿ ಕೂಟವು ಅಧಿಕಾರಿಗಳಿಗೆ ಆಭಾರಿಯಾಗಿದೆ ಎಂದು ತಿಳಿಸಿದ್ದಾರೆ.

ಕೂಟದ ಪದಾಧಿಕಾರಿಗಳು ಮಾಜಿ ಮತ್ತು ಹಾಲಿ ಸಚಿವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿರುವ ಬೇಡಿಕೆಗಳು: ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೇ ಈ ಕೂಡಲೇ ಮರು ನೇಮಕ ಮಾಡಿಕೊಳ್ಳವುದು, ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ ಹಾಗೂ ಇತರೆ ಶಿಕ್ಷೆಗಳನ್ನು ಯಾವುದೆ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡಿ, ದಿನಾಂಕ: 06/04/2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ, ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ನೀಡುವುದು. ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು, ಸರ್ಕಾರದ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಳ್ಳುವುದು.

ಮುಷ್ಕರದ ಸಮಯದಲ್ಲಿ ನಾಲ್ಕು ನಿಗಮಗಳ ಸಾರಿಗೆ ನೌಕರರ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ದಾಖಲಿಸಿರುವ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯುವುದು.

ಸಾರಿಗೆ ನಿಗಮಗಳಲ್ಲಿ ಕೂಡಲೆ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು, (1992 ನಂತರ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿರುವುದಿಲ್ಲ)

ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್‌ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಖಾಸಗಿಯವರಿಗೆ ವಹಿಸಿರುವುದು, ಇತರ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು ಮತ್ತು ಕೆಲವು ಮಾರ್ಗಗಳನ್ನು ಖಾಸಗಿ ವಾಹನಗಳ ಚಾಲನೆಗೆ ಅನುಮತಿ ನೀಡಿ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣದ ಮೂಲಕ ರಾಜ್ಯದ ಯುವಕರಿಗೆ ಮತ್ತಷ್ಟು ನಿರುದ್ಯೋಗ ಸಮಸ್ಯೆಯನ್ನು ಸೃಷ್ಟಿ ಮಾಡುವ ಯೋಜನೆಯನ್ನು ಈ ಕೂಡಲೆ ಕೈ ಬಿಡುವಂತೆ ನೌಕರರ ಕೂಟದ ಪದಾಧಿಕಾರಿಗಳು ಮನವಿ ಮಾಡಿದರು.

ಧಾರವಾಡ ವಿಭಾಗದ ಕೂಟದ ಅಧ್ಯಕ್ಷ ಕೆ.ತಿರುಪತಿ, ಪ್ರಧಾನ ಕಾರ್ಯದರ್ಶಿ ಬಿ.ಸಂತೋಷ್ ಕುಮಾರ್, ಸಂಘಟನಾ ಕಾರ್ಯದರ್ಶಿ ನಿರಂಜನ್ ಹಿರೇಮಠ್, ಖಜಾಂಚಿ ಶ್ರೀಕಾಂತ್, ಪದಾಧಿಕಾರಿಗಳಾದ
ಮಂಜುಳಾ ಗುತ್ತೇದಾರ್, ಟಿ.ಡಿ. ಮಕಂದರ್, ಈಶ್ವರ್ ಇಂಗಳಗಿ, ಗಂಗಾಧರ ಆಗಿಸಿ ಮನೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ