NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ₹7 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲನಾ ಸಿಬ್ಬಂದಿ: ಶ್ಲಾಘಿಸಿದ ಡಿಸಿ ಶ್ರೀನಿವಾಸ್‌

ವಿಜಯಪಥ ಸಮಗ್ರ ಸುದ್ದಿ

ಶಿರಸಿ:  ಪ್ರಯಾಣಿಕರು ಬಸ್‌ನಲ್ಲಿ ಮರೆತು ಬಿಟ್ಟುಹೋಗಿದ್ದ 6-7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರಸುದಾರರಿಗೆ ವಾಪಸ್‌ ಮಾಡುವ ಮೂಲಕ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಶಿರಸಿ ಘಟಕದ ಚಾಲನಾ ಸಿಬ್ಬಂದಿ ಪ್ರಮಾಣಿಕತೆ ಮೆರೆದಿದ್ದಾರೆ.

ನಿರ್ವಾಹಕ ಸೇವಾಲಾಲ್‌ ರಾಥೋಡ್ ಹಾಗೂ ಚಾಲಕ ವಿನೋದ್ ನಾಯ್ಕ್ ಪ್ರಯಾಣಿಕರು ಬಿಟ್ಟು ಹೋಗಿದ್ದ ಸುಮಾರು 7 ಲಕ್ಷ ರೂ. ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳನ್ನು ವಾರಸುದಾರರಿಗೆ ಮರಳಿಸಿ ತಮ್ಮ ಸೇವಾ ಪ್ರಾಮಾಣಿಕತೆಯನ್ನು ಮೆರೆದ ಚಾಲನಾ ಸಿಬ್ಬಂದಿ.

ಬಸ್‌ನಲ್ಲಿ ಪ್ರಯಾಣಿಕರು ಚಿನ್ನಾಭರವನ್ನು ಬಿಟ್ಟು ಹೋಗಿರುವ ವಿಷಯವನ್ನು ಕೂಡಲೇ ಸಿರ್ಸಿ ಘಟಕ ವ್ಯವಸ್ಥಾಪಕ ಸರ್ವೇಶ್‌ ನಾಯಕ್‌ ಅವರ ಗಮನಕ್ಕೆ ತಂದಿದ್ದಾರೆ. ಅವರು ಆ ಎಲ್ಲ ಆಭರಣಗಳನ್ನು ಪಡೆದು ಜೋಪಾಮ ನಾಡಿದ್ದರು.

ಇನ್ನು ಚಾಲನಾ ಸಿಬ್ಬಂದಿಯ ಈ ಪ್ರಾಮಾಣಿಕತನವನ್ನು ಶಿರಸಿ ವಿಭಾಗಿಯ ನಿಯಂತ್ರಾಧಿಕಾರಿ ಶ್ರೀನಿವಾಸ್‌ ನಾಯಕ್‌  ಶ್ಲಾಘಿಸಿದ್ದು, ವಿಶೇಷ ಅಭಿನಂದನೆಗಳನ್ನು ಸಲ್ಲಿಸುವ ಮೂಲಕ ಅವರ ಪ್ರಾಮಾಣಿಕ ಸೇವೆಯನ್ನು ಕೊಂಡಾಡಿದ್ದಾರೆ. ಇಂತಹ ನೌಕರರು ಸಂಸ್ಥೆಯ ಘನತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಈ ಚಾಲನಾ ಸಿಬ್ಬಂದಿಯ ಕಾರ್ಯವನ್ನು ಕೇಂದ್ರ ಕಚೇರಿಗೆ ಶಿಫಾರಸು ಮಾಡಿ  ಪ್ರಶಸ್ತಿ ಪತ್ರ ಮತ್ತು ಗೌರವವನ್ನು ಸಲ್ಲಿಸುವುದಕ್ಕೆ  ಮುಂದಾಗುವುದಾಗಿ ತಿಳಿಸಿದ್ದಾರೆ.

ಆಭರಣಗಳನ್ನು ಮರಳಿ ಪಡೆದ ವಾರಸುದಾರರು ಸಹ ಹರ್ಷ ವ್ಯಕ್ತಪಡಿಸಿದ್ದು ಪ್ರಾಮಾಣಿಕತೆ ಮೆರೆದ ಸಿಬ್ಬಂದಿಗಳಿಬ್ಬರಿಗೂ ವಿಶೇಷ ಅಭಿನಂದನೆ ಸಲ್ಲಿಸಿದರು.

ನಿಮ್ಮ ವಿಜಯಪಥ ಕನ್ನಡ ಯೂ ಟೂಬ್‌ ಚಾಲನ್‌ಅನ್ನು ಸಬ್‌ಸ್ಕ್ರೈಬ್‌ ಮಾಡಿಕೊಂಡು ಉತ್ತೇಜಿಸಿ… ಸಂಪಾದಕರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?