ಬಬಲೇಶ್ವರ: ಅಡ್ಡ ಬಂದ ಬೈಕ್ ಸವಾರರ ಜೀವು ಉಳಿಸಲು ಹೋದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಪಲ್ಟಿಯಾಗಿರುವ ಘಟನೆ ಬಬಲೇಶ್ವರ ಹತ್ತಿರ ಹಲಗಣಿ ಕ್ರಾಸ್ ಬಳಿ ನಡೆದಿದೆ.
ಘಟನೆಯಿಂದ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಇಂದು ಜಮಖಂಡಿ – ವಿಜಯಪುರ ಮಾರ್ಗವಾಗಿ ಚಲಿಸುತ್ತಿದ್ದ NWKRTC ಬಸ್ ಬಬಲೇಶ್ವರ ಹತ್ತಿರ ಹಲಗಣಿ ಕ್ರಾಸ್ ಬಳಿ ಬರುತ್ತಿದ್ದಂತೆ ಏಕಾಏಕಿ ಬೈಕ್‌ವೊಂದು ಅಡ್ಡ ಬಂದಿದೆ. ಈ ವೇಳೆ ಬೈಕ್‌ಸವಾರರನ್ನು ಉಳಿಸುವ ಭರದಲ್ಲಿ ಚಾಲಕ ಬಸ್‌ಅನ್ನು ತಿರುಗಿಸಿದ್ದರಿಂದ ಬಸ್ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಒಟ್ಟಾರೆ ಬಸ್ ಪಲ್ಟಿಯಾದರೂ ಬಸ್‌ನಲ್ಲಿದ್ದ ಮಂದಿಗೆ ಯಾವುದೇ ತರಹದ ದೊಡ್ಡಪೆಟ್ಟು ಆಗಿಲ್ಲ ಎಂದು ತಿಳಿದು ಬಂದಿದೆ. ಸಣ್ಣಪುಟ್ಟಗಾಯಗಳಾಗಿದ್ದ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)