NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ನೌಕರರಿಗೆ ‘ಸಾರಿಗೆ ಸಂಜೀವಿನಿ’ ನಗದು ರಹಿತ ಚಿಕಿತ್ಸೆ ಜಾರಿ – ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಸಿಬ್ಬಂದಿಗೆ ಉಚಿತ ಆರೋಗ್ಯ ಯೋಜನೆ ಜಾರಿಯಾಗಿದ್ದು, ಯಾವುದೇ ಹಣವಿಲ್ಲದೆ ಚಿಕಿತ್ಸೆ ಪಡೆಯುವ ಸೌಲಭ್ಯವನ್ನು ನೌಕರರಿಗೆ ಕಲ್ಪಿಸಲಾಗಿದೆ.

ಹೌದು! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತಿಯಲ್ಲಿ ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ‘ಸಾರಿಗೆ ಸಂಜೀವಿನಿ’ ಯೋಜನೆ ಜಾರಿಗೆ ಮುನ್ನುಡಿ ಬರೆಯಲಾಯಿತು. ಹುಬ್ಬಳ್ಳಿಯ ಪ್ರತಿಷ್ಠಿತ ‘ಕಿಮ್ಸ್’ ಸಹಯೋಗದಲ್ಲಿ ‘ಸಾರಿಗೆ ಸಂಜೀವಿನಿ’ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಂಬಂಧ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

NWKRTC ಸಂಸ್ಥೆ ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಕಾರವಾರ (ಉತ್ತರ ಕನ್ನಡ) ಜಿಲ್ಲೆಗಳ ವ್ಯಾಪ್ತಿ ಸೇರಿದಂತೆ ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ಒಟ್ಟು 21,120 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಅವರಲ್ಲಿ 15 ಸಾವಿರ ನೌಕರರು ಚಾಲಕ-ನಿರ್ವಾಹಕರಾಗಿದ್ದಾರೆ.

ಇನ್ನು ‘ಸಾರಿಗೆ ಸಂಜೀವಿನಿ’ ಕುರಿತು ಮಾಹಿತಿ ಹಂಚಿಕೊಂಡ ಸಚಿವ ರಾಮಲಿಂಗಾರೆಡ್ಡಿ, ಈ ಯೋಜನೆಯಿಂದ ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಅವಲಂಬಿತರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗಲಿದೆ. ಇದರ ಸದುಪಯೋಗವನ್ನು ಅನಾರೋಗ್ಯಕ್ಕೆ ಒಳಗಾಗಿರುವ ನೌಕರರು ಮತ್ತು ಅವರ ಅವಲಂಬಿತಪರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಾರಿಗೆ ನಿಗಮವು ಈವರೆಗೂ ಅಗತ್ಯ ಸೌಲಭ್ಯ ಕಲ್ಪಿಸುತ್ತಾ ಬಂದಿದ್ದು, ನೌಕರರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಅವಶ್ಯಕತೆಯನುಸಾರ ವೈದ್ಯಕೀಯ ಮುಂಗಡ ನೀಡಲಾಗುತ್ತಿದೆ. ಕಳೆದ ಆರ್ಥಿಕ ವರ್ಷದಲ್ಲಿ ಎಲ್ಲ ವಿಭಾಗಗಳಿಂದ 4,401 ಪ್ರಕರಣಗಳಲ್ಲಿ 523.47 ಲಕ್ಷ ರೂ.ಗಳ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲಾಗಿದೆ ಎಂದು ವಿವರಿಸಿದರು.

ನೌಕರರಿಗೆ ಉತ್ತಮ ಆರೋಗ್ಯ ಮತ್ತು ಚಿಕಿತ್ಸೆಗಾಗಿ 106 ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರ ಗುರುತಿಸಿರುವ 380ಕ್ಕೂ ಹೆಚ್ಚಿನ ಆಸ್ಪತ್ರೆಗಳಿಗೆ ಮಾನ್ಯತೆ ನೀಡಿ ವೈದ್ಯಕೀಯ ಚಿಕಿತ್ಸೆಯ ಸೌಲಭ್ಯಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ನೌಕರರು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮರುಪಾವತಿಗಾಗಿ ಸಲ್ಲಿಸುವ ಬಿಲ್ಲುಗಳು CGHS-2014 ದರಗಳಲ್ಲಿ ಪರಿಗಣಿಸುವುದರಿಂದ ವಾಸ್ತವಿಕ ವೆಚ್ಚದಷ್ಟು ಮೊತ್ತವು ಮರುಪಾವತಿ ಆಗದೇ ಇರುವುದರಿಂದ ನೌಕರರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವುದು ಕಂಡು ಬಂದಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದ ಕಿಮ್ಸ್ ಸಂಸ್ಥೆಯವರೊಂದಿಗೆ ಈ ನಗದು ರಹಿತ ಚಿಕಿತ್ಸಾ ಸೌಲಭ್ಯದ ಒಪ್ಪಂದವನ್ನು ಮಾಡಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಸಂಸ್ಥೆ ನೌಕರರು ಅನಾರೋಗ್ಯದಿಂದ ಬಳಲುತ್ತಿರುವಾಗ ಹಣಕಾಸಿನ ಕೊರತೆ ಇದ್ದಾಗ ಚಿಕಿತ್ಸೆ ಪಡೆದುಕೊಳ್ಳಲು ಹಿಂದೆ ಸರಿಯಬಾರದು ಎಂಬ ಉದ್ದೇಶದಿಂದ, ಅವರು ಕಿಮ್ಸ್ ಆಸ್ಪತ್ರೆಗೆ ಬಂದು ತಮ್ಮ ಪರಿಚಯ ಹೇಳಿಕೊಂಡು ತಮ್ಮ ಗುರುತಿನ ಚೀಟಿ ತೋರಿಸಿ ಚಿಕಿತ್ಸೆಗೆ ದಾಖಲಾದರೆ, ಕಿಮ್ಸ್ ಸಂಸ್ಥೆಯವರು ಯಾವುದೇ ಹಣ ಪಡೆಯದೆ ಚಿಕಿತ್ಸೆ ನೀಡಿ, ಅವರನ್ನು ಗುಣಪಡಿಸಲಿದ್ದಾರೆ ಎಂದು ವಿವರಿಸಿದರು.

ಇನ್ನು ತದನಂತರದಲ್ಲಿ ವೈದ್ಯಕೀಯ ಚಿಕಿತ್ಸೆಯನುಸಾರ ಬಿಲ್ಲನ್ನು ನೌಕರರ ಪರವಾಗಿ ಸಾರಿಗೆ ಸಂಸ್ಥೆಯು ಕಿಮ್ಸ್ ಸಂಸ್ಥೆಗೆ ಭರಿಸುತ್ತದೆ. ಅನಾರೋಗ್ಯದಿಂದ ಬಳಲುತ್ತಿರುವ ನೌಕರರು ಯಾವುದೇ ರೀತಿಯ ಅಡಚಣೆ ಇಲ್ಲದೇ ಸಂಸ್ಥೆಯ ಗುರುತಿನ ಚೀಟಿ ನೀಡಿ ನಗದು ರಹಿತವಾಗಿ ಚಿಕಿತ್ಸೆಯನ್ನು ಪಡೆಯುವ ಯೋಜನೆ ಇದಾಗಿದೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್‌.ಭರತ್, ಹುಬ್ಬಳ್ಳಿ ಕಿಮ್ಸ್ ನಿರ್ದೇಶಕ ಡಾ.ಎಸ್. ಎಫ್.ಕಮ್ಮಾರ, ಕಿಮ್ಸ್ ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ ಹಾಗೂ , ಡಾ. ಲಕ್ಷ್ಮೀಕಾಂತ ಲೋಕರೆ ಸೇರಿದಂತೆ ಕಿಮ್ಸ್ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ