CrimeNEWSನಮ್ಮರಾಜ್ಯ

ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರು ಸೂಚನೆ ನೀಡಿದ್ದಾರೆ.

ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲ ಡಾ ಥಾವರ್ ಚಂದ್ ಗೆಹ್ಲೋಟ್ ಅವರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಳೆದ ಸೆಪ್ಟೆಂಬರ್‌ 24ರಂದು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನಗಳ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್‌ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿತ್ತು.

ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದ ವಿರುದ್ಧ ಕಳೆದ ಸೆಪ್ಟೆಂಬರ್‌ 25ರಂದು ಮಾಧ್ಯಮಗಳೊಂದಿಗೆ ಮಾತನಾಡುವಾಗ ಜಮೀರ್‌ ʻನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್‌ ಜಡ್ಜ್‌ಮೆಂಟ್‌. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದರು. ಮರುದಿನ ತಮ್ಮ ಹೇಳಿಕೆ ಕುರಿತು ಕ್ಷಮೆ ಕೋರಿದ್ದರು.

ಜಮೀರ್‌ ಅವರ ಈ ಹೇಳಿಕೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ನ್ಯಾಯಾಂಗ ನಿಂದನೆಯ ಜತೆಗೆ ಸಚಿವ ಜಮೀರ್ ಅಹಮದ್ ವಿರುದ್ಧ ಕ್ರಿಮಿನಲ್ ಪ್ರೊಸಿಡಿಂಗ್‌ಗೆ ದೂರು ನೀಡಿದ್ದರು. ಆ ದೂರಿನ ಹಿನ್ನೆಲೆ ಅಡ್ವೋಕೇಟ್ ಜನರಲ್‌ಗೆ ಪತ್ರ ಬರೆದಿರುವ ರಾಜ್ಯಪಾಲರು ಸಚಿವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ