Search By Date & Category

NEWSನಮ್ಮಜಿಲ್ಲೆಶಿಕ್ಷಣ-

ಎಸ್ಎಸ್‌ಎಲ್‌ಸಿ ಪರೀಕ್ಷೆ : ಮಾ.31ರಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಕಲ್ಪಿಸಿದ ಬಿಎಂಟಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಎಸ್ಎಸ್‌ಎಲ್‌ಸಿ ಪರೀಕ್ಷೆ ಇದೇ ಮಾ.31ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.

ಮಾ. 31ರಿಂದ ಏಪ್ರಿಲ್ 15ರ ವರೆಗೆ ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೆರವಿಗಾಗಿ ಬಿಎಂಟಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೂ ಉಚಿತ ಪ್ರಯಾಣ ಮಾಡುವುದಕ್ಕೆ ಅವಕಾಶ ಕಲ್ಪಿಸಿದೆ.

ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಪರೀಕ್ಷೆಯ ದಿನ ಪರೀಕ್ಷಾ ಕೇಂದ್ರ ಮಾರ್ಗದಲ್ಲಿ ಬಸ್ ಸಂಚರಿಸುವುದಾಗಿ ಬಿಎಂಟಿಸಿ ತಿಳಿಸಿದೆ. ಜತೆಗೆ ಹೆಚ್ಚುವರಿ ಅಗತ್ಯವಿದ್ದಲ್ಲಿ ಬಸ್‌ ಇದ್ದರೇ ಕ್ರಮವಹಿಸಲು ಮುಂದಾಗಿದೆ.

Leave a Reply

error: Content is protected !!