CRIMENEWSನಮ್ಮಜಿಲ್ಲೆ

ಕುಡಿದು ಠಾಣೆಗೆ ನುಗ್ಗಿ ಪೊಲೀಸರಿಗೇ ಅವಾಜ್ ಹಾಕಿ ಅಧಿಕಾರಿ ಸಹೋದರನ ರಂಪಾಟ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಗದಗ: ಪೊಲೀಸ್‌ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿಸಿದ ಅಕ್ಷತ್ ಹದ್ದಣ್ಣವರ್‌ ನಿಂದ ಈ ಎಲ್ಲ ರಂಪಾಟ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಕ್ಷತ್ ಹಾಗೂ ಸಹಚರನಿಂದ ರಾತ್ರಿಯಿಡೀ ಹೈಡ್ರಾಮಾ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಈತನ ಜತೆಗೆ ಸಹಚರನನ್ನು ತರಾಟೆಗೆ ತೆಗೆದುಕೊಂದ್ದಾರೆ.

ಕುಡಿದ ಮತ್ತಿನಲ್ಲಿ ಏಕಾಏಕಿ ಕಾರ್‌ನಲ್ಲಿ ಬಂದು ಪೊಲೀಸ್ ಠಾಣೆಗೆ ನುಗ್ಗಿ, ನಾನು ವಕೀಲ ಯಾರು ಏನು ಮಾಡ್ತಿರಿ ಎಂದು ಠಾಣೆಯ ಬಳಿಯಿದ್ದ ಸ್ಥಳೀಯರೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ.

ಅಲ್ಲದೆ ಸಿಪಿಐ, ಪಿಎಸ್‌ಐ ವಾಹನ ನಿಲ್ಲಿಸುವ ಸ್ಥಳದಲ್ಲಿ ಅಕ್ಷತ್ ತನ್ನ ಕಾರ್ ಪಾರ್ಕಿಂಗ್ ಮಾಡಿದ್ದು, ಅಧಿಕಾರಿಗಳ ಕಾರು ನಿಲ್ಲಿಸಲು ಸ್ಥಳವಿಲ್ಲದ ಕಾರಣ ಠಾಣೆಯ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದರು. ಬೆಟಗೇರಿ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಏಕವಚನ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪವಿದೆ.

ಇಷ್ಟೆಲ್ಲ ನಡೆದರೂ ಪೊಲೀಸರು ಕೇವಲ ಡ್ರಿಂಕ್ & ಡ್ರೈವ್ ಟೆಸ್ಟ್ ಮಾಡಿ ಕಳುಹಿಸಿದ್ರಾ? ಅಕಸ್ಮಾತ್ ಜನಸಾಮಾನ್ಯರು ಹೀಗೆ ಮಾಡಿದ್ರೆ ಪೊಲೀಸರು ಸುಮ್ಮನೆ ಬಿಡ್ತಿದ್ರಾ? ಅಧಿಕಾರಿ ಸಹೋದರನಿಗೆ ಒಂದು ನ್ಯಾಯ, ಜನ ಸಾಮಾನ್ಯರಿಗೊಂದು ಕಾನೂನಾ? ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ರೂ ಪೊಲೀಸರು ಸುಮ್ಮನಿರೋದಾದ್ರೂ ಯಾಕೆ?

ಇನ್ನು ಈ ಐಪಿಎಸ್ ಅಧಿಕಾರಿ ಸಹೋದರನ ಆಟಾಟೋಪ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement
Megha
the authorMegha

Leave a Reply

error: Content is protected !!