Please assign a menu to the primary menu location under menu

NEWSಕೃಷಿದೇಶ-ವಿದೇಶವಿಡಿಯೋ

ಡಿ.31ರಂದು ಜಗಜಿತ್ ಸಿಂಗ್ ದಲೈವಾಲರ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಪಂಜಿನ ಪ್ರತಿಭಟನಾ ಮೆರವಣಿಗೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಒಳಿತಿಗಾಗಿ ಉಪವಾಸ ನಡೆಸುತ್ತಿರುವ ಜಗಜಿತ್ ಸಿಂಗ್ ದಲೈವಾಲ ಅವರ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಡಿ.31ರ ಸಂಜೆ 6 ಗಂಟೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಇಂದು ಪಂಜಾಬ್ ರಾಜ್ಯ ದಲೈವಾಲ ಅವರ ಉಪವಾಸ ಬೆಂಬಲಿಸಿ ಸಂಪೂರ್ಣ ಬಂದ್ ಆಚರಿಸುವ ಸಂಬಂಧ ನಗದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರೈತರು ಕೇಂದ್ರ ಸರ್ಕಾರದ ಭಿಕ್ಷೆ ಕೇಳುತ್ತಿಲ್ಲ ನಮ್ಮ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಮಾಡಬೇಕೆಂದು ಕೇಳುತ್ತ ಹೋರಾಟ ಮಾಡುತ್ತಿದ್ದೇವೆ. ಈ ಬಗ್ಗೆ ಗಂಭೀರತೆ ತೋರದ ಕೇಂದ್ರ ಸರ್ಕಾರ, ಯಾರು ಕೇಳದೆ ಇರುವ ಒಂದು ದೇಶ ಒಂದು ಚುನಾವಣೆ. ಒಂದು ದೇಶ ಒಂದು ಜಿಎಸ್‌ಟಿ. ಒಂದು ದೇಶ ಒಂದು ಪಡಿತರ ಕಾರ್ಡ್ ಜಾರಿಗೆ ತರುತ್ತಿದೆ.

ದೇಶದಲ್ಲಿ ಶೇಕಡ 80ರಷ್ಟು ಇರುವ ರೈತರು ಕೇಂದ್ರ ಸರ್ಕಾರಕ್ಕೆ ಮತ ನೀಡಿದ್ದಾರೆ. ರೈತರು ಕೇಳುತ್ತಿರುವ ಒತ್ತಾಯಕ್ಕೆ ನಿರಾಶಕ್ತಿ ತೋರುತ್ತಿರುವ ಕೇಂದ್ರ ಸರ್ಕಾರ ಯಾಕೆ ಎಂಬುದನ್ನು ಕೇಳಬೇಕು. ಅದಕ್ಕೆ ನಾವು ಆಯ್ಕೆ ಮಾಡಿ ನಿಮ್ಮನ್ನು ಲೋಕಸಭೆ ಕಳುಹಿಸಿದ್ದೇವೆ. ನೀವು ಸಂಸದರಾಗಿ ನಿದ್ರೆ ಮಾಡಬೇಡಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯಿರಿ. ಇಲ್ಲದಿದ್ದರೆ ಹಳ್ಳಿಗಳಿಗೆ ಬಂದರೆ ನಿಮ್ಮನ್ನು ಹೊರಗೆ ಇಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತ ನಾಯಕ ದಲೈವಾಲ ಅವರು 33 ದಿನದಿಂದ ಉಪವಾಸ ಕುಳಿತಿದ್ದಾರೆ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆಯೇ ಎಂದು ಪ್ರಶ್ನೆ ಮಾಡುತ್ತಿದ್ದೇವೆ. ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಮೇಣದ ಬತ್ತಿ ಉರಿಸಿ ಪ್ರತಿಭಟನೆ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಪ್ರಧಾನಿಗಳು ವಿದೇಶಗಳಿಗೆ ಹೋಗಿ ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ಅಲ್ಲಿ ಹಿತವಚನ ಹೇಳುತ್ತಾರೆ. ಆದರೆ ನಮ್ಮ ಪ್ರಧಾನಿ ಮೋದಿ ಅವರಿಗೆ ದೇಶದ ರೈತರು ನ್ಯಾಯಕ್ಕಾಗಿ ತಿಂಗಳುಗಟ್ಟಲೆ ಉಪವಾಸ ಮಾಡುತ್ತಿದ್ದರು ಕಾಣುತ್ತಿಲ್ಲವೆ ನಮ್ಮೊಂದಿಗೆ ಮಾತುಕತೆ ಮಾಡಲು ಇವರಿಗೆ ಸಮಯವಿಲ್ಲವೇ ಎಂದು ಕಿಡಿಕಾರಿದರು.

ಇನ್ನು 33 ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಜಗಜಿತ್ ಸಿಂಗ್ ದಲೈವಾಲ ಅವರನ್ನ ಆಸ್ಪತ್ರೆಗೆ ರವಾನಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದರು ಇನ್ನೂ ಪಾಲಿಸಿಲ್ಲ ಎಂದು ನ್ಯಾಯಾಂಗ ಉಲ್ಲಂಘನೆ ಮೊಕದ್ದಮೆ ದಾಖಲಿಸುವುದಾಗಿ ಪಂಜಾಬ್ ಸರ್ಕಾರಕ್ಕೆ ಎಚ್ಚರಿಸಿದೆ. ‌

ಬೇರೆ ಬೇರೆ ರಾಜ್ಯಗಳ ರೈತರು ಕನೂರಿ ಬಾರ್ಡರ್‌ಗೇ ಪ್ರತಿನಿತ್ಯ ಸಾವಿರಾರು ಸಂಖ್ಯೆ ರೈತರು ಜಮಾವಣೆ ಆಗುತ್ತಿದ್ದಾರೆ. ಕರ್ನಾಟಕ ರೈತರ ತಂಡವು ಸದ್ಯದಲ್ಲಿಯೇ ದೆಹಲಿ ಕಡೆ ಹೋಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಸೂರಿ ಇದ್ದರು.

Leave a Reply

error: Content is protected !!
LATEST
ದಲೈವಾಲ ಜೀವಕ್ಕೆ ಅಪಾಯವಾದರೆ ದೇಶದಲ್ಲಿ ರೈತದಂಗೆ ಆಗಲಿದೆ: ಕುರುಬೂರು ಶಾಂತಕುಮಾರ್‌ ಎಚ್ಚರಿಕೆ KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KSRTC: ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಜ.6ರಂದು ಸಿಎಂ ಚಾಲನೆ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ 32 ಪತ್ರಕರ್ತರಿಗೆ ಪ್ರಶಸ್ತಿ ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್‌ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ  ಹೊಸ ವರ್ಷದ ಸಂಭ್ರಮದಲ್ಲಿದ್ದ ಪ್ರಿಯಕರನಿಗೆ ಇರಿದ ಪ್ರೇಯಸಿ -ಅಷ್ಟಕ್ಕೂ ಆಗಿದ್ದೇನು? ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು KSRTC: 4 ಸಾರಿಗೆ ನಿಗಮಗಳು 2,000 ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಸರ್ಕಾರ ವರ್ಲ್ಡ್ ಆಫ್ ರೆಕಾರ್ಡ್ಸ್: ವಿಶ್ವ ದಾಖಲೆ ಸೇರಿದ 1.9 ವರ್ಷದ ಜನ್ವಿತಾ