NEWSನಮ್ಮಜಿಲ್ಲೆರಾಜಕೀಯ

ಫೆಬ್ರವರಿ 15ರಂದು ಆಮ್‌ ಆದ್ಮಿ ಪಾರ್ಟಿಯ ʻಪೊರಕೆಯೇ ಪರಿಹಾರʼ ಯಾತ್ರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆಯ ಬೆಂಗಳೂರು ನಗರದಲ್ಲಿನ ಪ್ರಚಾರಕ್ಕೆ ʻಪೊರಕೆಯೇ ಪರಿಹಾರʼ ಎಂಬ ಯಾತ್ರೆಯ ಮೂಲಕ ಫೆಬ್ರವರಿ 15ರ ಬುಧವಾರದಂದು ಚಾಲನೆ ನೀಡಲಾಗುತ್ತದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ ತಿಳಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿ, “ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮುಂಭಾಗದಿಂದ ಯಾತ್ರೆ ಆರಂಭವಾಗಲಿದೆ. ಸಂಗೊಳ್ಳಿ ರಾಯಣ್ಣ ವೃತ್ತ, ಆನಂದ್‌ ರಾವ್‌ ವೃತ್ತದ ಮೂಲಕ ಫ್ರೀಡಂ ಪಾರ್ಕ್‌ ತಲುಪಿ, ಅಲ್ಲಿ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಸ್ವಚ್ಛತೆ, ಶಿಕ್ಷಣ, ಆರೋಗ್ಯ, ವಿದ್ಯುತ್‌ ಮುಂತಾದ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಆಮ್‌ ಆದ್ಮಿ ಪಾರ್ಟಿಯೊಂದೇ ಪರಿಹಾರವಾಗಿದೆ. ಇದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಯಾತ್ರೆ ಆಯೋಜಿಸಲಾಗಿದೆ” ಎಂದು ವಿವರಿಸಿದರು.

ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್‌ ಕುಮಾರ್‌ ಮಾತನಾಡಿ, ಇದೇ ಫೆಬ್ರವರಿ 15ರಂದು ನಡೆಯಲಿರುವ ಯಾತ್ರೆಯಲ್ಲಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ಮಟ್ಟದ ಪದಾಧಿಕಾರಿಗಳು, ಸ್ಪರ್ಧಾಕಾಂಕ್ಷಿಗಳು, ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸಲಿದ್ದಾರೆ ಎಂದರು.

ಇನ್ನು ರಾಜ್ಯವನ್ನಾಳಿದ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಆಡಳಿತದಿಂದ ಕರ್ನಾಟಕದ ಜನರು, ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಜನರು ಬೇಸತ್ತಿದ್ದಾರೆ. ಆಮ್‌ ಆದ್ಮಿ ಪಾರ್ಟಿಯೊಂದೇ ರಾಜ್ಯದ ಜನತೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರವೆಂಬುದು ಅವರಿಗೆ ಮನವರಿಕೆ ಆಗುತ್ತಿದೆ. ದೆಹಲಿಯಲ್ಲಿ ಆಮ್‌ ಆದ್ಮಿ ಪಾರ್ಟಿ ನೀಡುತ್ತಿರುವ ಜನಪರ ಆಡಳಿತವನ್ನು ಕರ್ನಾಟಕದಲ್ಲೂ ಕಾಣಬೇಕೆಂದು ಜನತೆ ಬಯಸುತ್ತಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಉಪಾಧ್ಯಕ್ಷ ಅಶೋಕ್‌ ಮೃತ್ಯುಂಜಯ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ