NEWSಕೃಷಿನಮ್ಮಜಿಲ್ಲೆ

ಫೆ.28ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ: ಕುರುಬೂರು ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬ್ಬಿನ ಹೆಚ್ಚುವರಿ 150 ರೂ. ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಕೊಡಿಸುವಂತೆ ಫೆ.28ರಂದು  ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಸತತ 39 ದಿನಗಳ ಹೋರಾಟದ ಪರಿಣಾಮ ಕಬ್ಬಿಗೆ ರೂ. 150 ಹೆಚ್ಚುವರಿ ಆದೇಶ ಮಾಡಿದ್ದರು. ಬಣ್ಣಾರಿ ಸಕ್ಕರೆ ಕಾರ್ಖಾನೆ ಹೆಚ್ಚುವರಿ ಹಣ ಪಾವತಿಸದೆ ಇರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಜಾರಿಯಾಗಿಲ್ಲ ಎಂದು ಮೈಸೂರಿನ ಜಲ ದರ್ಶಿನಿ ಅಥಿತಿ ಗೃಹದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಅರಿಶಿಣ ಬೆಳೆಗೆ ಬೆಲೆ ಕುಸಿತವಾಗಿದ್ದು ಉತ್ಪಾದನಾ ವೆಚ್ಚವು ಸಿಗುತ್ತಿಲ್ಲ, ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‌ಗೆ 17,500  ರೂ. ನಿಗದಿ ಮಾಡಬೇಕು. ಕಾವೇರಿ – ಕಬಿನಿ ಅಚ್ಚುಕಟ್ಟು ನಾಲೆಗಳ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಕಬ್ಬು, ಬಾಳೆ ಇನ್ನಿತರ ಬೆಳೆಗಳ ರಕ್ಷಣೆಗಾಗಿ, ಬೇಸಿಗೆಯಲ್ಲಿ ದನ ಕರುಗಳ ಕುಡಿಯುವ ನೀರಿಗಾಗಿ ಕೆರೆ ಕಟ್ಟೆಗಳನ್ನು ತುಂಬಿಸಲು ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೃಷಿ ಪಂಪ್‌ಸೆಟ್‌ಗಳಿಗೆ ಬೆಳಗ್ಗೆ 6 ರಿಂದ ಸಂಜೆ 6 ರವರಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ನೀಡಬೇಕು. ಕಾಡುಪ್ರಾಣಿಗಳ ದಾಳಿಯಿಂದ ರೈತರು ಭಯ ಭೀತರಾಗಿರುವ ಕಾರಣ ಹಗಲು ವೇಳೆ ವಿದ್ಯುತ್ ನೀಡಬೇಕು. ಕನಿಷ್ಠ ಬೆಂಬಲ ಬೆಲೆ ಭತ್ತ, ರಾಗಿ ಇತರೆ ಉತ್ಪನ್ನಗಳ ಖರೀದಿ ಕೇಂದ್ರಗಳಲ್ಲಿ, ರೈತರಿಂದ ಖರೀದಿ ಮಿತಿ ವಿಧಿಸಿರುವುದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ಫಸಲ್ ಭೀಮಾ ಬೆಳೆವಿಮೆ ಪದ್ಧತಿ ರೈತರಿಗೆ ಸಹಕಾರಿಯಲ್ಲ, ಕಂಪನಿಗಳಿಗೆ ಲಾಭ ತರುವ ಯೋಜನೆಯಾಗಿದೆ, ಇನ್ನಾದರೂ ರೈತರ ಅನುಕೂಲಕ್ಕೆ ತಕ್ಕಂತೆ ನಿಯಮಗಳನ್ನು ಬದಲಾಯಿಸಬೇಕು. ಬ್ಯಾಂಕ್‌ಗಳಲ್ಲಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ನೀತಿ ಕೈ ಬಿಡಬೇಕು. ಕೃಷಿ ಸಾಲ ನೀತಿ ಬದಲಾಗಬೇಕು. ರಸಗೊಬ್ಬರ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ, ಕೆಲವು ಕಡೆ ಕಳಪೆ ರಸಗೊಬ್ಬರ ಕೀಟನಾಶಕ ಮಾರಾಟ ಮಾಡುವುದನ್ನು ತಡೆಗಟ್ಟಬೇಕು.

ಜಿಲ್ಲೆಯಲ್ಲಿ ಸಾವಿರಾರು ರೈತರು ಹತ್ತಾರು ವರ್ಷಗಳಿಂದಲೂ ಸಾಗುವಳಿ ಮಾಡಿಕೊಂಡು ಹೋಗುತ್ತಿರುವ ಜಮೀನುಗಳಿಗೆ ಸಾಗುವಳಿ ಪತ್ರವನ್ನು ನೀಡದೆ ನಿರ್ಲಕ್ಷ ವಹಿಸುತ್ತಿದ್ದಾರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ರೈತರಿಗೆ ನ್ಯಾಯಬದ್ಧವಾಗಿ ಸಾಗುವಳಿ ಪತ್ರವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಕಾಡು ಪ್ರಾಣಿಗಳ ಹಾವಳಿಯಿಂದ ನಾಶವಾಗುವ ಪರಿಹಾರ ಧನ ಸಂಪೂರ್ಣ ನಷ್ಟ ಭರಿಸಬೇಕು, ಜೀವ ಹಾನಿಗೆ ಕನಿಷ್ಠ 50 ಲಕ್ಷ ಪರಿಹಾರ ನೀಡಬೇಕು. ಕಾಡಂಚಿನಲ್ಲಿ ಪ್ರಾಣಿಗಳ ಸಾವಿಗೆ ರೈತರನ್ನ ಬಂಧಿಸಿ ಜೈಲಿಗೆ ಕಳಿಸುವ, ರೈತರನ್ನ ಭಯೋತ್ಪಾದಕರಂತೆ ಬಿಂಬಿಸುವ ಅರಣ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ದೇಶದೊಳಗೆ ವಿದೇಶಿ ಕಾರ್ಪೊರೇಟ್ ಕಂಪನಿಗಳು ಕೃಷಿ, ವ್ಯಾಪಾರ ಕ್ಷೇತ್ರದ ಒಳಗೆ ಪ್ರವೇಶಿಸದಂತೆ ವಹಿವಾಟು ನಿಷೇಧ (ಎಪ್ ಡಿ ಐ) ವಿಧಿಸುವಂತೆ ಒತ್ತಾಯಿಸಲು ಮಾರ್ಚ್ 7ರಂದು ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘಟನೆಯಿಂದ ರಾಷ್ಟ್ರೀಯ ವಿಚಾರ ಸಂಕೀರ್ಣ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ , ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಲಕ್ಷ್ಮಿಪುರ ವೆಂಕಟೇಶ್, ಕಾಟೂರು ಮಹದೇವಸ್ವಾಮಿ ಇದ್ದರು.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...