Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಜ.24ರಂದು ದೃಶ್ಯ ಮಾಧ್ಯಮಗಳು ಒಂದು ಸರ್ಕಾರ ಅಥವಾ ಪಕ್ಷದ ಪರ ನಿಂತ ಹಿನ್ನೆಲೆ ದುರ್ಬಲಗೊಳ್ಳಿತ್ತಿದೆ ಜನತಂತ್ರ ವ್ಯವಸ್ಥೆ – ವಿಮರ್ಸಗೋಷ್ಠಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮವನ್ನು ನಾಲ್ಕನೇ ಆಧಾರ ಸ್ತಂಭವೆಂದು ಪರಿಗಣಿಸಲಾಗಿದೆ. ಹೀಗಾಗಿ ಶಾಸಕಾಂಗ, ಕಾರ್ಯಾಂಗ, ಮತ್ತು ನ್ಯಾಯಾಂಗದ ಕೆಲಸ ಕಾರ್ಯಗಳ ಬಗ್ಗೆ ವಸ್ತುನಿಷ್ಠವಾಗಿ ವರದಿ ಮಾಡುವ ಮೂಲಕ ಸರ್ಕಾರ ಮತ್ತು ಜನಸಾಮಾನ್ಯರ ನಡುವೆ ಮಾಧ್ಯಮಗಳು ಸೆತುವೆಯಂತೆ ಕಾರ್ಯನಿರ್ವಹಿಸಬೇಕೆಂಬುದು ಪ್ರಜಾಪ್ರಭುತ್ವದ ಪ್ರತಿಯೊಬ್ಬ ನಾಗರೀಕನ ನಿರೀಕ್ಷೆ.

ಇಂದು ನಗರದಲ್ಲಿ ಆಯೋಜಿಸಿದ್ದ ಮಾಧ್ಯಮ ಹಾಗೂ ಜನತಂತ್ರ ವ್ಯವಸ್ಥೆ ಕುರಿತು ವಿಚಾರ ವಿಮರ್ಸಗೋಷ್ಠಿಯಲ್ಲಿ ಈ ಬಗ್ಗೆ ಹಲವರು ವಿಚಾರ ವಿನಿಯಮ ಮಾಡಿಕೊಂಡಿದ್ದು, ಈ ವೇಳೆ ಶಾಸಕಾಂಗ ಮತ್ತು ಕಾರ್ಯಾಂಗ ಜನರ ಹಿತಾಸಕ್ತಿಯನ್ನು ಕಡೆಗಣಿಸಿ ದಿಕ್ಕು ತಪ್ಪಿದಾಗ ಮಾಧ್ಯಮಗಳು ಈ ವ್ಯವಸ್ಥೆಗಳನ್ನು ಎಚ್ಚರಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಆದ್ಯ ಕರ್ತವ್ಯವನ್ನು ಹೊಂದಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಅದರಲ್ಲೂ ವಿಶೇಷವಾಗಿ ದೃಶ್ಯ ಮಾಧ್ಯಮಗಳು ಒಂದು ಸರ್ಕಾರ ಅಥವಾ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿದೆ. ಶಾಸಕಾಂಗ ಮತ್ತು ಕಾರ್ಯಾಂಗದ ಆಡಳಿತದಲ್ಲಿ ದುರಾಡಳಿತ ಜನತಂತ್ರ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ.

ಈ ಬಗೆಯ ಅಪವಿತ್ರ ಮೈತ್ರಿ ಜನತಂತ್ರ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದ್ದು ಪ್ರಜಾಪ್ರಭುತ್ವ ಇಂದು ಅಪಾಯದ ಅಂಚಿನಲ್ಲಿದೆ ಎಂಬ ಚರ್ಚೆಗಳು ಕಳೆದ ಹಲವು ವರ್ಷಗಳಿಂದ ನಡೆಯುತ್ತಿವೆ. ಈ ವಿಷಯಗಳ ಬಗ್ಗೆ ಮುಕ್ತವಾಗಿ ಮತ್ತು ವಸ್ತುನಿಷ್ಠವಾಗಿ ಚರ್ಚಿಸಿ ವಿಮರ್ಶೆ ಮಾಡಬೇಕಾದ ಕಾಲ ಇಂದು ನಮ್ಮ ಮುಂದಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ನೆಲ ಜಲ ಸಂರಕ್ಷಣ ಸಮಿತಿಯು ಒಂದು ಮುಕ್ತ ಚರ್ಚೆಯನ್ನು ಸಂಘಟಿಸುವ ಮೂಲಕ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು, ನ್ಯಾಯಾಂಗದ ಪ್ರತಿನಿಧಿಗಳನ್ನು, ಸಾಮಾಜಿಕ ಹೋರಾಟಗಾರರನ್ನು ಮತ್ತು ಜನಸಾಮಾನ್ಯರನ್ನು ಒಟ್ಟಿಗೆ ಸೇರಿಸಿ ಚರ್ಚಿಸಲು ದಿನಾಂಕ 24.01.2024 ರ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಸಕರ ಭವನ ಎರಡರಲ್ಲಿ ವಿಚಾರಗೋಷ್ಠಿಯನ್ನು ಏರ್ಪಡಿಸಿದೆ.

ಈ ಕಾರ್ಯಕ್ರಮ ಆಯೋಜಕರಾದ ರೈತ ಮುಖಂಡ ಕುರುಬೂರು ಶಾಂತಕುಮಾರ್,   ಮುಖ್ಯಮಂತ್ರಿ ಚಂದ್ರು, ಅಭಿವೃದ್ಧಿ ಶಿಕ್ಷಣ ತಜ್ಞರು ಡಾ.ನಿರಂಜನಾರಾಧ್ಯ ವಿ.ಪಿ, ಗುರುದೇವ ನಾರಾಯಣ್, ಯೋಗಾನಂದ ಅಂದು ಎಲ್ಲರೂ ತಪ್ಪದೆ ಭಾಗವಹಿಸಿ ಎಂದು ಕೋರಿದ್ದಾರೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ