ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು, ಲೋಪವೆಸಗಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಣಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮುನಿಯಪ್ಪ ಅವರು ಸೋಮವಾರ ವಿಧಾನ ಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನ್ಸಿ ಮುಖ್ಯಸ್ಥರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ, ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSPಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳುಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಗಳನ್ನು ಹಾಗೂ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳಕ್ಕೆ 3,371 ಹಾಗೂ ಮಾಲದಂಡಿ ಜೋಳ 3,421, ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2,300 ಗ್ರೇಡ್ ಎ2,320 ದರ ನಿಗದಿಯಾಗಿದ್ದು, ಈ ದರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು ಎಂದರು.
ಜಿಲ್ಲಾಧಿಕಾರಿಗಳು ಖರೀದೀಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಪಿಸಬೇಕು. ಕಾರಣ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರುವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತರಾದ ವಾಸಿ ರೆಡ್ಡಿ ವಿಜಯ ಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ.ಎಸ್.ಎನ್. ಬಾಬು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...