CRIMEನಮ್ಮಜಿಲ್ಲೆ

ಬಸ್‌ಗಳ ನಡುವೆ ಅಪಘಾತ ಓರ್ವ ಪ್ರಯಾಣಿಕ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಮದನಪಲ್ಲಿ- ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್‌ಗಳ ನಡುವೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಸಮೀಪದ ಗುಂಟಪಲ್ಲಿ ಕ್ರಾಸ್‌ನಲ್ಲಿ ಜರುಗಿದೆ.

ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಗಂಗಾಧರ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿರುವ 15 ಕ್ಕೂ ಹೆಚ್ಚು ಪ್ರಯಾಣಿಕರನ್ನು ರಾಯಲ್ಪಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದನಪಲ್ಲಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಕರ್ನಾಟಕ ಗಡಿಯಲ್ಲಿ ಈ ಖಾಸಗಿ ಬಸ್‌ಗಳು ಅಪಘಾತಕ್ಕೀಡಾಗಿವೆ. ಖಾಸಗಿ ಬಸ್‌ಗಳ ಚಾಲಕರು ಅತೀ ವೇಗವಾಗಿ ಬಸ್‌ಗಳನ್ನು ಓಡಿಸುತ್ತಿರುವುದರಿಂದ ಇಂಥ ಅವಘಗಳು ಸಂಭವಿಸುತ್ತಿವೆ ಎಂದು ಪ್ರಯಾಣಿಕ ಶ್ರೀಸಾಯಿ ಎಂಬುವರು ತಿಳಿಸಿದ್ದಾರೆ.

ಇನ್ನು ಈ ಬಸ್‌ಗಳಿಗೆ ಕಡಿವಾಣ ಹಾಕಬೇಕಾದರೆ ಕೆಎಸ್‌ಆರ್‌ಟಿಸಿ ಹಾಗೂ ಎಪಿಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಾಗಿಈ ಮಾರ್ಗದಲ್ಲಿ ಬಿಡಬೇಕು ಎಂದು ಶ್ರೀಸಾಯಿ ಅಗ್ರಹಿಸಿದ್ದಾರೆ. ಅಲ್ಲದೆ ಈ ಬಸ್‌ಗಳು ಪ್ರಯಾಣಿಸಲು ಸುರಕ್ಷಿತವಾಗಿವೆ ಹೀಗಾಗಿ ಕರ್ನಾಟಕ ಮತ್ತು ಆಂಧ್ರದ ಗಡಿಗಳಿಂದ ಅಂತಾರಾಜ್ಯ ಕೆಎಸ್‌ಆರ್‌ಟಿಸಿ ಎಪಿಎಸ್‌ಆರ್‌ಟಿಸಿ ಬಸ್‌ಸೇವೆಯನ್ನು ಹೆಚ್ಚಿಸಿ ಬೆಂಗಳೂರಿನಿಂದ ಕಡಪ ಮದನಪಲ್ಲಿ ತಿರುಪತಿ ಶ್ರೀಕಾಳಹಸ್ತಿಗೆ ಸುರಕ್ಷಿತ ಪ್ರಯಾಣಕ್ಕೆ ಭಾರಿ ಬೇಡಿಕೆ ಇದೆ ಎಂದು ತಿಳಿಸಿದ್ದಾರೆ.

ಅಪಘಾತ ಸಂಬಂಧ ರಾಯಲ್ಪಾಡು ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ