NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರಿಗೆ ಸಿಹಿಸುದ್ದಿ ಕೊಟ್ಟ ಒನ್‌ ಮ್ಯಾನ್‌ ಕಮಿಟಿ: ವೇತನ ಹಿಂಬಾಕಿ ಚರ್ಚೆಗೆ ಆ.10ರಂದು ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ನೌಕರರಿಗೆ ಕೊನೆಗೂ ಒನ್‌ ಮ್ಯಾನ್‌ ಕಮಿಟಿ ಅಧ್ಯಕ್ಷ ನಿವೃತ್ತ ಐಎಎಸ್‌ಅಧಿಕಾರಿ ಎಂ.ಆರ್‌.ಶ್ರೀನಿವಾಸ್‌ಮೂರ್ತಿ ಸಿಹಿಸುದ್ದಿ ನೀಡಿದ್ದಾರೆ.

2020ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಸಂಬಂಧ ಇದೇ ಆ.10ರಂದು ನೌಕರರ ವಿವಿಧ ಸಂಘಟನೆಗಳ ಮುಖಂಡರ ಸಭೆಯನ್ನು ಕರೆದಿದ್ದಾರೆ. ಹೀಗಾಗಿ ಅಂದು ಮಧ್ಯಾಹ್ನ 2.30ಕ್ಕೆ ಸಂಘಟನೆಗಳ ಪದಾಧಿಕಾರಿಗಳು ಹಾಜರಾಗುವಂತೆ ತಿಳಿಸಿದ್ದಾರೆ.

ಇನ್ನು 2020ರ ಜನವರಿ 1ರಿಂದಲೇ ಹಿಂಬಾಕಿ ( Arrears) ಕೊಡುವ ಸಂಬಂಧ ಮಾರ್ಚ್‌ನಿಂದ ಈವರೆಗೂ ಯಾವುದೇ ತೀರ್ಮಾನವಾಗಿಲ್ಲ. ಕಾರಣ ಈ ಸಂಬಂಧ ಸಾರಿಗೆ ಅಧಿಕಾರಿಗಳು, ಸರ್ಕಾರದ ಅಧಿಕಾರಿಗಳು, ನೌಕರರ ಸಂಘಟನೆಗಳು ಹಾಗೂ ನ್ಯಾಯಾಲಯದ ಅಧಿಕಾರಿಗಳು ಒನ್‌ ಮ್ಯಾನ್‌ ಕಮಿಟಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿ ಅದರಲ್ಲಿ ತೀರ್ಮಾನ ತೆಗೆದುಕೊಂಡ ಬಳಿಕ ಹಿಂಬಾಕಿಯ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಅಂದಿನ ಬಿಜೆಪಿ ಸರ್ಕಾರ ತಿಳಿಸಿತ್ತು.

ಆ ಬಳಿಕ ಚುನಾವಣೆ ನಡೆದು ಸರ್ಕಾರ ಬದಲಾಗಿದ್ದರಿಂದ ಈವರೆಗೂ ವೇತನ ಹಿಂಬಾಕಿ ಸಂಬಂಧ ಯಾವುದೇ ಸಭೆಗಳನ್ನು ಮಾಡಲಾಗಿರಲಿಲ್ಲ. ಹೀಗಾಗಿ ಈ ಸಭೆಯನ್ನು ಕರೆಯಲಾಗುತ್ತಿದೆ. ಹೌದು! ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ನೌಕರರು/ ಅಧಿಕಾರಿಗಳು (ಪೂರ್ವ ಕಿಂಕೋ ನೌಕರರ/ ಅಧಿಕಾರಿಗಳು ಸೇರಿದಂತೆ) 31.12.2019 ರಂದು ಪಡೆಯುತ್ತಿದ್ದ ಮೂಲ ವೇತನಕ್ಕೆ ಶೇ.15 ರಷ್ಟು ಹೆಚ್ಚಿಸಿ, ಅದರಂತೆ ವೇತನ ಶ್ರೇಣಿ ಪರಿಷ್ಕರಿಸಿ, 01.03.2023 ರಿಂದ ಜಾರಿಗೊಳಿಸಿ ರಾಜ್ಯ ಸರ್ಕಾರವು 17.03.2023ರಂದು ಆದೇಶ ಹೊರಡಿಸಿತ್ತು.

ಆದರೆ, 2020ರ ಜನವರಿ 1ರಿಂದ ವೇತನ ಪರಿಷ್ಕರಣೆ ಮಾಡಬೇಕಿದ್ದು, ಅದನ್ನು ಮಾರ್ಚ್‌ 2023ರಲ್ಲಿ ಮಾಡಲಾಗಿದೆ. ಆದರೆ ಹಿಂಬಾಕಿ ಕೊಡುವುದು ಯಾವಾಗಿನಿಂದ ಎಂಬುವುದು ಇನ್ನೂ ತೀರ್ಮಾನವಾಗಿಲ್ಲ. ಈ ನಡುವೆ ಸರ್ಕಾರ ಈ ಬಗ್ಗೆ ಕಳೆದ ಮಾರ್ಚ್‌17ರಂದು ಶೇ.15ರಷ್ಟು ವೇತನ ಹೆಚ್ಚಳದ ಆದೇಶ ಹೊರಡಿಸಿದ ಸಂದರ್ಭದಲ್ಲೇ ಒಂದು ತಿಂಗಳ ಒಳಗಾಗಿ ಈ ಎಲ್ಲ ಅಧಿಕಾರಿಗಳು ಸಭೆ ಸೇರಿ ಹಿಂಬಾಕಿಯನ್ನು ಯಾವಾಗಿನಿಂದ ಕೊಡಬೇಕು ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸ್ಪಷ್ಟ ಪಡಿಸಿತ್ತು. ಆದರೂ ಅದು ಈವರೆಗೂ ಸಾಧ್ಯವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಮತ್ತು ನೌಕರರಿಗೆ ಯಾವಾಗಿನಿಂದ ವೇತನದ ಹಿಂಬಾಕಿ ಕೊಡಬೇಕು ಎಂಬುವುದು ಇನ್ನು ಅಂತಿಮ ತೀರ್ಮಾನವಾಗಿಲ್ಲ. ಆದರೆ, ಈ ಬಗ್ಗೆ ನೌಕರರಲ್ಲಿ ಹಲವು ರೀತಿಯ ಗೊಂದಲಗಳಿದ್ದು, ಆ ಗೊಂದಲಗಳನ್ನು ನಿವಾರಿಸುವ ಸಲುವಾಗಿ ವಿಜಯಪಥ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡುವ ಮೂಲಕ ಸ್ಪಷ್ಟ ಮಾಹಿತಿ ಪಡೆದು ಅದನ್ನು ನೌಕರರಿಗೆ ತಲುಪಿಸುವ ಕೆಲಸವನ್ನು ಕೂಡ ಮಾಡಿತ್ತು.

ಈ ಒನ್‌ ಮ್ಯಾನ್‌ ಕಮಿಟಿ ಸಭೆ ನಡೆಯುವವರೆಗೂ ಯಾವುದೇ ಹಿಂಬಾಕಿ ಕೊಡುವ ಬಗ್ಗೆ ಸ್ಪಷ್ಟತೆ ಸಿಗುವುದಿಲ್ಲ ಎಂಬುವುದು ಖಚಿತವಾಗಿತ್ತು. ನೌಕರರು ಯಾವುದೇ ಗೊಂದಲಕ್ಕೂ ಒಳಗಾಗದೆ ಸಭೆ ನಡೆಯುವವರೆಗೂ ಕಾದು ನೋಡಬೇಕು. ಆನಂತರವಷ್ಟೆ ಹಿಂಬಾಕಿಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವುದು ಎಂದು ಅಧಿಕಾರಿಗಳು ವಿಜಯಪಥಕ್ಕೆ ತಿಳಿಸಿದ್ದರು.

ಶತಾಯಗತಾಯ ಒಟ್ಟಾರೆ ನೌಕರರಿಗೆ ಸಿಹಿ ಸುದ್ದಿಕೊಡುವ ಕಾಲ 5ತಿಂಗಳ ಬಳಿಕ ಕೂಡಿ ಬಂದಿದ್ದು, ಎಲ್ಲ ನೌಕರರಿಗೂ ಒಂದು ತಿಂಗಳೂ ಲೆಸ್‌ಆಗದೇ ಎಲ್ಲ ತಿಂಗಳ ಹಿಂಬಾಕಿ ಸಿಗಲಿ ಎಂದು ಹಾರೈಸೋಣ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು