CRIMENEWSಬೆಂಗಳೂರು

BMTC ಬಸ್‌ ಬೈಕ್‌ಗೆ ಡಿಕ್ಕಿ: ಓರ್ವ ಸವಾರ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗ ಸಂಸ್ಥೆ (ಬಿಎಂಟಿಸಿ) ಬಸ್ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೊಬ್ಬನ ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.

ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಸಹಿತ ಬಸ್‌ಕಳಗೆ ಬೈಕ್‌ ನುಗ್ಗಿದೆ. ಹೀಗಾಗಿ ಬೈಕ್ ಸವಾರರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಸದ್ಯ ಗಾಯಾಳು ಸವಾರನನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ