NEWSನಮ್ಮರಾಜ್ಯಸಂಸ್ಕೃತಿ

ಎಎಪಿಯಿಂದ ಮಾತ್ರ ರಾಮ ರಾಜ್ಯ ನಿರ್ಮಾಣ ಸಾಧ್ಯ: ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶದ ಹೆಮ್ಮೆಯ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ನಗರದಲ್ಲಿರುವ ಆಮ್ ಆದ್ಮಿ ಪಕ್ಷದ ಕೇಂದ್ರ ಕಾರ್ಯಾಲಯದಲ್ಲಿ ರಾಮ ಭಜನೆ ಹಾಗೂ ಸುಂದರ ಕಾಂಡ ಸ್ತೋತ್ರ ಪಠಣ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಮ್ ಆದ್ಮಿ ಪಕ್ಷದ ಮುಖಂಡರು, ನಾಯಕರು ಶ್ರದ್ಧಾಭಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಮನಿಗೆ ಪೂಜೆ ಸಲ್ಲಿಸಿದರು. ರಾಮನ ಭಜನೆ ಮತ್ತು ಸ್ತೋತ್ರವನ್ನು ಎಲ್ಲರೂ ಪಠಿಸುವ ಮೂಲಕ ಅಯೋಧ್ಯೆ ರಾಮನಿಗೆ ಪ್ರಾರ್ಥನೆ ಸಲ್ಲಿಸಿದರು.

ಪೂಜೆಯ ಬಳಿಕ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ. ಆದರೆ ರಾಮ ರಾಜ್ಯ ನಿರ್ಮಾಣ ಮಾಡುವುದು ಆಮ್ ಆದ್ಮಿ ಪಕ್ಷದಿಂದ ಮಾತ್ರ ಸಾಧ್ಯ ಎಂದರು.

ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ ಸಿಗಬೇಕು. ಬಡತನ ಇರಲೇಬಾರದು, ಯಾರು ಹಸಿವಿನಿಂದ ಸಾಯಬಾರದು. ಎಲ್ಲರೂ ಸುಖಶಾಂತಿಯಿಂದ ಬದುಕಬೇಕು ಎನ್ನುವುದೇ ರಾಮರಾಜ್ಯದ ಕಲ್ಪನೆಯಾಗಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್‌ನಲ್ಲಿ ರಾಮ ರಾಜ್ಯ ನಿರ್ಮಾಣ ಮಾಡಲಾಗಿದೆ. ಇಡೀ ದೇಶದಲ್ಲಿ ರಾಮ ರಾಜ್ಯ ನಿರ್ಮಾಣ ಮಾಡಲು ಆಮ್ ಆದ್ಮಿ ಪಕ್ಷ ಪಣ ತೊಟ್ಟಿದೆ. ಅದಕ್ಕಾಗಿ ಈ ಕಾರ್ಯಕ್ರಮಗಳನ್ನು ನೆರವೇರಿಸಲಾಗಿದೆ ಎಂದು ಹೇಳಿದರು.

500 ವರ್ಷಗಳ ಕನಸು ನನಸಾಗುತ್ತಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಕೂಡ ರಾಮರಾಜ್ಯದಂತೆ ಆಗಬೇಕು. ಆಮ್ ಆದ್ಮಿ ಪಕ್ಷದಿಂದ ಮಾತ್ರ ಅದನ್ನು ಮಾಡಲು ಸಾಧ್ಯ ಎಂದರು. ರಾಮ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯಬೇಕು ಎಂದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ