NEWSದೇಶ-ವಿದೇಶನಮ್ಮರಾಜ್ಯ

ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಂಡನೆಗೆ ಮುಕ್ತ ಸ್ವಾಗತ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಎಚ್‌.ಡಿ.ದೇವೇಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ.

ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಇನ್ನು 27 ವರ್ಷಗಳ ನಂತರ ದೇವೇಗೌಡ ಅವರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ. 1995ರಲ್ಲಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು ಎಂದು ವಿವರಿಸಿದ್ದಾರೆ.

ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ. ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಪ್ರಧಾನಿಗಳಾದ ನರೇಂದ್ರ ಮೋದಿ ಅವರು, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲ ಪಕ್ಷಗಳು ಬೆಂಬಲಿಸಬೇಕು ಎನ್ನುವುದು ನನ್ನ ಮನವಿ ಎಂದಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್