NEWSನಮ್ಮಜಿಲ್ಲೆನಮ್ಮರಾಜ್ಯ

NWKRTCಯಲ್ಲೂ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ: ವ್ಯವಸ್ಥಾಪಕ ನಿರ್ದೇಶಕ ಎಸ್. ಭರತ್

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ 450 ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್. ಭರತ್ ತಿಳಿಸಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಸ್ತುತ 4830 ಬಸ್‌ಗಳಿದ್ದು, 4539 ಅನುಸೂಚಿಗಳ ಮೂಲಕ ಪ್ರತಿದಿನ ಸರಾಸರಿ 15 ಲಕ್ಷ ಕಿಲೋಮೀಟರ್ ಕಾರ್ಯಚರಣೆ ಮಾಡಲಾಗುತ್ತಿದೆ ಎಂದು ವಿವರಿಸಿದ ಅವರು, ಶಕ್ತಿ ಯೋಜನೆಗೆ ಮೊದಲು ನಿತ್ಯ 17.48 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ನಗರ ಸಾರಿಗೆ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಬಹಳಷ್ಟು ಏರಿಕೆಯಾಗಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ಕ್ರಮವಹಿಸಲಾಗುತ್ತಿದೆ. ಅದರ ಭಾಗವಾಗಿ ಒಟ್ಟು 450 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಅವುಗಳಲ್ಲಿ 200 ಗ್ರಾಮಾಂತರ ಸಾರಿಗೆ ಬಸ್‌ಗಳು, 150 ನಗರ ಸಾರಿಗೆ ಮಾದರಿ ಹಾಗೂ 100 ಬಿಆರ್‌ಟಿಎಸ್ ಮಾದರಿಯ ಬಸ್‌ಗಳು ಸೇರಿವೆ ಎಂದರು.

ಗ್ರಾಮಾಂತರ ಹಾಗೂ ನಗರ ಸಾರಿಗೆ ಬಸ್‌ಗಳನ್ನು ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ, ಹುಬ್ಬಳ್ಳಿ ಗ್ರಾಮಾಂತರ, ಧಾರವಾಡ ಹಾಗೂ ಬೆಳಗಾವಿ ವಿಭಾಗಗಳಿಂದ ಕಾರ್ಯಾಚರಣೆ ಮಾಡಲಾಗುವುದು. ಬಿಆರ್‌ಟಿಎಸ್ ಮಾದರಿಯ ಬಸ್‌ಗಳ ಕಾರ್ಯಚರಣೆ ಕುರಿತು ಟೆಂಡರ್ ಫಲಿತಾಂಶದ ಆಧಾರದ ಮೇಲೆ ಎಚ್. ಡಿ. ಬಿ‌.ಆರ್. ಟಿ.ಎಸ್. ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

ಜಿಸಿಸಿ ಮಾದರಿಯಲ್ಲಿ ಕಾರ್ಯಾಚರಣೆ: ಈ ಬಸ್‌ಗಳನ್ನು ಜಿ.ಸಿ.ಸಿ.(ಗ್ರಾಸ್ ಕಾಸ್ಟ್ ಕಾಂಟ್ರ್ಯಾಂಕ್ಟ್) ಮಾದರಿಯಲ್ಲಿ ಕಾರ್ಯಚರಣೆ ಮಾಡಲಾಗುವುದು. ಬಸ್ ಕಾರ್ಯಾಚರಣೆ ಕಿ.ಮೀ.ಆಧಾರದ ಮೇಲೆ ಸಂಸ್ಥೆಯು ಕಂಪನಿಗೆ ಹಣ ಪಾವತಿಸಲಿದೆ ಎಂದರು.

ಸಂಸ್ಥೆಯ ಪ್ರಸ್ತಾವನೆಗೆ ಸರ್ಕಾರದ ಅನುಮೋದನೆ: ಸಂಸ್ಥೆಯ ವ್ಯಾಪ್ತಿಯ ಪ್ರಮುಖ ನಗರಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಚರಣೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕುರಿತಂತೆ ಟೆಂಡರ್ ನಡೆಸಲು ಸರ್ಕಾರ ಅನುಮೋದನೆ ನೀಡಿದೆ. ಟೆಂಡರ್ ನಿಬಂಧನೆಗಳನ್ನು ಅಂತಿಮಗೊಳಿಸಿ ಶೀಘ್ರದಲ್ಲಿ ಟೆಂಡರ್ ಹೊರಡಿಸಲಾಗುವುದು. ನಂತರ ವಿವರಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು.

ಇನ್ನು ನಗರ ಸಾರಿಗೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಬಗ್ಗೆ ಅಗತ್ಯ ಮಾಹಿತಿ ಪಡೆಯಲು ಸಂಸ್ಥೆಯ ಅಧಿಕಾರಿಗಳ ತಂಡವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕೆಎಸ್‌ಆರ್‌ಟಿಸಿ ನಿಗಮಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಸದ್ಯ ಈಗ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿ ನಿಗಮಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡುತ್ತಿದ್ದು, ಶೀಘ್ರದಲ್ಲೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲೂ ತನ್ನ ಕಾರ್ಯಾಚರಣೆ ಮಾಡಲಿದೆ. ಆದರೆ, ಇದನ್ನು ಖಾಸಗಿ ಕಂಪನಿಗೆ ವಹಿಸಿ ನಡೆಸುವುದಕ್ಕಿಂದ ನಿಗಮವೇ ನಡೆಸಿದರೆ ಭಾರಿ ಅನುಕೂಲವಾಗುತ್ತದೆ ಎಂದು ನೌಕರರ ಸಂಘಟನೆಗಳ ಮುಖಂಡರು ಒತ್ತಾಯ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು